14
May, 2026

A News 365Times Venture

14
Thursday
May, 2026

A News 365Times Venture

ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್

Date:

ಚಿಕ್ಕಮಗಳೂರು,ಮೇ,4,2026 (www.justkannada.in):  ಹೈಕೋರ್ಟ್‌ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ  ನಡೆದಿದ್ದು , 2023ರಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255 ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಗೆ ಇದೀಗ 52 ಮತಗಳ ಮುನ್ನಡೆ ಸಿಕ್ಕಿದೆ. ಇಂದು ಡಿ.ಎನ್.ಜೀವರಾಜ್‌ ಅವರಿಗೆ ಚುನಾವಣಾ ಅಧಿಕಾರಿ ಶಾಸಕ ಪ್ರಮಾಣ ಪತ್ರ ಹಸ್ತಾಂತರಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌  ನಿಂದ ಸ್ಪರ್ಧಿಸಿದ್ದ ಟಿ.ಡಿ.ರಾಜೇಗೌಡ ಅವರು 201 ಮತಗಳ  ಅಂತರದಿಂದ ಜಯಗಳಿಸಿದ್ದರು. ಬಿಜೆಪಿಯ ಡಿ.ಎನ್.ಜೀವರಾಜ್ ಸೋಲನುಭವಿಸಿದ್ದರು. ಈ ಸಂಬಂಧ ಬಿಜೆಪಿ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಏ.6 ರಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು.

Key words: Postal vote, recount, Sringeri, BJP, DN Jeevaraj ,  MLA certificate

The post ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...