ಬೆಂಗಳೂರು,ಮೇ,26,2025 (www.justkannada.in): ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮಡೆನೂರು ಮನು ವಿರುದ್ದ ಸಹಕಲಾವಿದೆ ಅತ್ಯಾಚಾರ ಆರೋಪ ಮಾಡಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು.
ಪೊಲೀಸರು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದರು. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ಬಳಿಕ ಇಂದು ಪೊಲೀಸರು ಮಡೆನೂರು ಮನುವನ್ನು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ.
Key words: Rape case, Madenur Manu, 14 days, judicial custody
The post ಅತ್ಯಾಚಾರ ಆರೋಪ ಕೇಸ್: ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.