ಬೆಂಗಳೂರು,ಮಾರ್ಚ್,16,2026 (www.justkannada.in): ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ವಿಧಾನ ಸಭೆಯ ಕಲಾಪದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ಕರ್ತವ್ಯ ಲೋಪ ಎಸಗಿದ ಕಂದಾಯ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ (PWD) ಇಲಾಖೆಯ ತಲಾ ಒಬ್ಬ ಅಧಿಕಾರಿಯನ್ನ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.
ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಇಲಾಖೆಗಳಿಂದ ಸೂಕ್ತ ಮತ್ತು ನಿಖರವಾದ ಮಾಹಿತಿ ಒದಗಿಸದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸದನವನ್ನು ಮುಂದೂಡಿದ್ದರು. ಸ್ಪೀಕರ್ ಅವರ ಆಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ.ಅಮಾನತುಗೊಂಡ ಅಧಿಕಾರಿಗಳಲ್ಲದೆ, ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಈ ಕುರಿತು ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.
Key words: CM orders, suspension, three officer, Session
The post ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




