ಬೆಂಗಳೂರು,ಮೇ,15,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಉಗ್ರರು, ಪಾಕ್ ವಿರುದ್ದ ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ನಡೆಸುತ್ತಿದೆ.
ನಗರದ ಮಲ್ಲೇಶ್ವರದ ಸಂಪಿಗೆ ರಸ್ತೆಯ ಶಿರೂರು ಪಾರ್ಕ್ ನಿಂದ 18ನೇ ಕ್ರಾಸ್ ವರೆಗೆ ತಿರಂಗಾ ಯಾತ್ರೆ ಹಮ್ಮಿಕೊಂಡಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ. ವಿಪಕ್ಷ ನಾಯಕ ಅಶೋಕ್, ರವಿಕುಮಾರ್ ಎಂಎಲ್ ಸಿ ಸಿಟಿ ರವಿ ಶಾಸಕರಾದ ಅಶ‍್ವಥ್ ನಾರಾಯಣ್ ಭೈರತಿ ಬಸವರಾಜ್, ಮುನಿರತ್ನ ಸೇರಿ ಹಲವರು ಭಾಗಿಯಾಗಿದ್ದಾರೆ.
ರಾಷ್ಟ್ರೀಯ ಭಧ್ರತೆಗಾಗಿ ನಾಗರಿಕರು ಹೆಸರಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿದ್ದು . ಅಪರೇಷನ್ ಸಿಂಧೂರ್ ಟೋಪಿ ಧರಿಸಿ ಭಾರತೀಯ ಯೋಧರಿಗೆ ಅಭಿನಂದನೆ ಸಲ್ಲಿಸಿದರು. ಇನ್ನು ಮೇ 16 ಮತ್ತು 17 ರಂದು ಜಿಲ್ಲಾ ಕೇಂದ್ರದಲ್ಲಿ ಮೇ 18 ರಿಂದ 23ರವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ.
Key words: Operation Sindoor, success, BJP, Tiranga Yatra
The post ಅಪರೇಷನ್ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.