ಬೆಂಗಳೂರು, ಮೇ,7,2025 (www.justkannada.in): ಪಹೆಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ.
ಆಪರೇಷನ್ ಸಿಂಧೂರ್ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸೂಚನೆ ನೀಡಿದ್ದಾರೆ.
ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
Key words: Operation Sindoora, Minister, Ramalinga Reddy, special puja
The post ಆಪರೇಷನ್ ಸಿಂಧೂರ: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸಚಿವ ರಾಮಲಿಂಗರೆಡ್ಡಿ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.