ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಆಗಸ್ಟ್ 5 ರಂದು ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಕಾರ್ಮಿಕ ಸಂಘಟನೆಗಳ ಸಮಿತಿ, ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೂಡಿದ್ದಾರೆ.
ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹಾಗೆಯೇ ಜನವರಿಯಲ್ಲೇ ವೇತನ ಹೆಚ್ಚಳ ಮಾಡಬೇಕಿತ್ತು. ಆದರೆ ಮಾಡಿಲ್ಲ ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.
4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Transport, strike , KSRTC, BMTC, August 5
The post ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.