14
September, 2026

A News 365Times Venture

14
Monday
September, 2026

A News 365Times Venture

ಇಂದಿನಿಂದ ಎರಡು ದಿನಗಳ ಕಾಲ ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆ: ದ್ವಿಪಕ್ಷೀಯ ಮಾತುಕತೆ

Date:

ನವದೆಹಲಿ,ಸೆಪ್ಟಂಬರ್,12,2026 (www.justkannada.in):  ಇಂದಿನಿಂದ ಎರಡು ದಿನಗಳ ಕಾಲ ನವದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಆಯೋಜನೆ ಮಾಡಲಾಗಿದ್ದು ವಿದೇಶಿ ಗಣ್ಯರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 2:35 ಬ್ರಿಕ್ಸ್ ನಾಯಕರ ಶೃಂಗಸಭೆ ಆರಂಭವಾಗಲಿದ್ದು,  ಭಾರಿ ಭದ್ರತೆ ನಿಯೋಜಿಸಲಾಗಿದೆ. ಶೃಂಗಸಭೆಗೆ ಭಾರತ ಆತಿಥ್ಯ ವಹಿಸಿದ್ದು, ವಿವಿಧ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ರಾಷ್ಟ್ರಾಧ್ಯಕ್ಷರು, ಸರ್ಕಾರದ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನವದೆಹಲಿಯ ಭಾರತ ಮಂಟಪಂ ಶೃಂಗಸಭೆಯ ಪ್ರಮುಖ ವೇದಿಕೆಯಾಗಿದೆ. ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಸೇರಿದಂತೆ ಪ್ರಮುಖ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ ಸಹಕಾರ, ವ್ಯಾಪಾರ, ಹೂಡಿಕೆ, ಹಣಕಾಸು ವ್ಯವಸ್ಥೆ, ಡಿಜಿಟಲ್ ತಂತ್ರಜ್ಞಾನ ಹಾಗೂ ಜಾಗತಿಕ ಆಡಳಿತ ಸುಧಾರಣೆ ಕುರಿತು ಚರ್ಚೆ ನಡೆಯಲಿದೆ. ಜಾಗತಿಕ ರಾಜಕೀಯದಲ್ಲಿ ಬಹುಧ್ರುವೀಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳ ಧ್ವನಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದು ಕೂಡ ಪ್ರಮುಖ ಚರ್ಚೆಯ ವಿಷಯವಾಗಿದೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ:  ವಿದ್ಯುತ್ ಗೂ ಅಭಾವ ಸಾಧ್ಯತೆ- ಸಿಎಂ ಡಿಕೆಶಿ

ರಾಮನಗರ,ಸೆಪ್ಟಂಬರ್,14,2026 (www.justkannada.in):  ರಾಜ್ಯದ ಸುಮಾರು 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರವಿದೆ. ಈ...

ಇನ್ನೊಂದು ವಾರದಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ- ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು,ಸೆಪ್ಟಂಬರ್,14,2026 (www.justkannada.in): ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು...

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ಉಚಿತ ತಪಾಸಣಾ ಶಿಬಿರ

  ಮೈಸೂರು, ಸೆ.೧೨,೨೦೨೬: ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ...

ಮೈಸೂರು: ಅಂಚೆ ಇಲಾಖೆಯಿಂದ ಉಚಿತ ಆಧಾರ್ ಕ್ಯಾಂಪ್

ಮೈಸೂರು,ಸೆಪ್ಟಂಬರ್,12,2026 (www.justkannada.in): ಅಂಚೆ ಇಲಾಖೆ ವತಿಯಿಂದ ಸಂಘ-ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ...