ಬೆಂಗಳೂರು,ಮಾರ್ಚ್,30,2026 (www.justkannada.in): ಇಂದಿನಿಂದ ಐದು ದಿನಗಳ ಕಾಲ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ, ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 50 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ನಿನ್ನೆ ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Key words: Rain, 5 days, Meteorological Department, forecast
The post ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




