ಅಹಮದಾಬಾದ್,ಜೂನ್,3,2025 (www.justkannada.in): ಇಂದು ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ 2025ರ ಫೈನಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಸೆಣಸಾಟ ನಡೆಸಲಿದೆ.
ಐಪಿಎಲ್ 18ರಲ್ಲಿ ಕಪ್ ಗೆಲ್ಲುವ ಫೇವರಿಟ್ ತಂಡವಾಗಿ ಆರ್‌ಸಿಬಿ ಕಾಣಿಸಿಕೊಂಡಿದೆ. ಫೈನಲ್‌ಗೆ ಮೊದಲ ತಂಡವಾಗಿ ಲಗ್ಗೆ ಇಟ್ಟಿದೆ. ಇದೀಗ ಪಂಜಾಬ್ ನ ಬಗ್ಗು ಬಡಿದು ಗೆಲುವಿನ ಕಿರೀಟ ಮುಡಿಗೇರಿಸಿಕೊಳ್ಳಲು ಸಜ್ಜಾಗಿದೆ. ಈ ಮೂಲಕ ಆರ್ ಸಿಬಿ ಅಭಿಮಾನಿಗಳಿಗೆ 18 ವರ್ಷದ ಕಾಯುವಿಕೆಗೆ ಫುಲ್ ಸ್ಟಾಪ್ ಇಡಲು ಸಜ್ಜಾಗಿದೆ. ಫೈನಲ್ ಪಂದ್ಯದಲ್ಲಿ ಬೆಂಗಳೂರು ತಂಡ ಕಪ್ ಗೆದ್ದು ಬರಲಿ ಅಂತ ಅಭಿಮಾನಿಗಳ ಪ್ರಾರ್ಥನೆ ಕೂಡ ಜೋರಾಗಿದೆ.
ಆರ್ ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ರಾಜ್ಯಾದ್ಯಂತ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ಇಂದು ಸಂಜೆ 7.30ಕ್ಕೆ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ಗೆದ್ದವರು ಚಾಂಪಿಯನ್ ಆಗಲಿದ್ದಾರೆ.
ತಂಡಗಳು ಹೀಗಿದೆ
ಆರ್ ಸಿಬಿ ಸಂಭಾವ್ಯ ತಂಡ
ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹೇಝಲ್ವುಡ್, ಯಶ್ ದಯಾಲ್.
Key words: IPL 2025 ,Final, Today,RCB vs Kings Punjab
The post ಇಂದು IPL 2025 ಫೈನಲ್: ಟ್ರೋಫಿಗಾಗಿ ಆರ್ ಸಿಬಿ vs ಪಂಜಾಬ್ ಕಿಂಗ್ಸ್ ಸೆಣಸಾಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.