16
July, 2025

A News 365Times Venture

16
Wednesday
July, 2025

A News 365Times Venture

ಇಂಧನ ಇಲಾಖೆಯ ಬಲ ಕೆಪಿಟಿಸಿಎಲ್ ನೌಕರರು:  ಬೇಡಿಕೆಗಳಿಗೆ ಸ್ಪಂದನೆ ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್

Date:

ಬೆಂಗಳೂರು, ಜೂನ್, 18, 2025 (www.justkannada.in):  ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ ನಿಗಮದ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, “ಕೆಪಿಟಿಸಿಎಲ್ ನೌಕರರ ಸಂಘದ ಉತ್ಸಾಹ ಹಾಗೂ ಸ್ಪೂರ್ತಿ ನೋಡಿದರೆ ನಾವು ಮತ್ತಷ್ಟು ಜನಪರ ಯೋಜನೆಗಳನ್ನು ರೂಪಿಸಿದರೂ ಅದನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಾರೆ ಎಂಬ ವಿಶ್ವಾಸ ಬರುತ್ತದೆ,” ಎಂದರು.

“ರಾಜ್ಯ ಸರ್ಕಾರ, ಇಂಧನ ಇಲಾಖೆ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪರವಾಗಿದೆ. ನೌಕರರ ಬೇಡಿಕೆಗಳನ್ನು ಆಡಳಿತ ಮಂಡಳಿ ಸಭೆಯ ಮುಂದೆ ಇಟ್ಟು ಸೂಕ್ತ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು”.

“ನಮ್ಮ ಸರ್ಕಾರದ ಪ್ರಮುಖ ಗ್ಯಾರಂಟಿ ಘೋಷಣೆ ಗೃಹಜ್ಯೋತಿ. ಇಂದು 1.65 ಕೋಟಿ ಮನೆಗಳಿಗೆ ತಲುಪಿದೆ. ಇವರೆಲ್ಲರಿಗೂ ಜೀರೋ ಬಿಲ್ ವಿತರಿಸುತ್ತಿದ್ದೇವೆ. ಅದೇ ರೀತಿ ಕುಸುಮ್- ಸಿ ಯೋಜನೆಗೆ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದೆ, ಕೇಂದ್ರ ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತಿದೆ. ಇದು ರೈತರಿಗೆ ಬಲ‌ತಂದಿದೆ. ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ ವಿದ್ಯುತ್ ಒದಗಿಸುವ ಈ ಯೋಜನೆಗೆ ಚಾಲನೆ ನೀಡಿದ್ದೇವೆ. ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಕೆಪಿಟಿಸಿಎಲ್ ವತಿಯಿಂದ ಹೆಚ್ಚುವರಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ, ಇದು ರೈತರಿಗೆ ಶಕ್ತಿ ನೀಡಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ,” ಎಂದು ಹೇಳಿದರು.

“ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹೇಳಿದಂತೆ ಜೈ ಜವಾನ್ ಜೈ ಕಿಸಾನ್ ಎಂಬುದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ರೈತರಿಗೆ ಹೆಚ್ಚಿನ ಯೋಜನೆ, ಸೌಲಭ್ಯ ಒದಗಿಸುತ್ತಿದೆ,” ಎಂದು ತಿಳಿಸಿದರು.

“ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮಂತ್ರಿಗಳೇ ನಮ್ಮ ಪವನ ವಿದ್ಯುತ್ ಯೋಜನೆಗಳಿಗೆ ‘ನಂಬರ್ ಒನ್’ ಸಾಧನೆ ಬಗ್ಗೆ ಪುರಸ್ಕಾರ ನೀಡಿದ್ದಾರೆ. ಈ ಹಿಂದೆ ಸೌರ ವಿದ್ಯುತ್ ಕ್ಷೇತ್ರದಲ್ಲಿ ಪಾವಗಡದಲ್ಲಿ ಸ್ಥಾಪಿಸಿದ್ದ ಸೌರ ಘಟಕ ದೇಶದಲ್ಲೇ ನಂಬರ್ ಒನ್ ಇತ್ತು. ಮತ್ತೆ ನಂಬರ್ ಒನ್ ನತ್ತ ಹೆಜ್ಜೆ ಇಡುತ್ತಿದ್ದೇವೆ. ನಾವೆಲ್ಲರೂ ಸೇರಿ ಮತ್ತಷ್ಟು ಶ್ರಮಿಸಿ ಸೌರ ವಿದ್ಯುತ್ ಕ್ಷೇತ್ರದಲ್ಲೂ ಕರ್ನಾಟಕ ಮೊದಲ ಸ್ಥಾನಕ್ಕೆ ಬರುವಂತೆ ಮಾಡಬೇಕಿದೆ,” ಎಂದು ತಿಳಿಸಿದರು.

ವಜ್ರಮಹೋತ್ಸವದ ಸಮಾರಂಭದಲ್ಲಿ 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವದ ಸವಿ ನೆನಪಿಗಾಗಿ ಹೊರತಂದಿರುವ ವಜ್ರಜ್ಯೋತಿ ಸ್ಮರಣ ಸಂಚಿಕೆ ಹಾಗೂ ನೌಕರರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ನೌಕರರ ಸಂಘದ ಅಧಿಕೃತ ಜಾಲತಾಣ www.kptceu.com ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜೀಂ ಪೀರ್ ಖಾದ್ರಿ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆವಿಕಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜು ಹಾಗೂ ನೌಕರರ ಸಂಘದ ಅಧ್ಯಕ್ಷ ಕೆ.ಬಲರಾಮ್, ಪ್ರಧಾನ ಕಾರ್ಯದರ್ಶಿ ಶಿವರಾಂ ಹಾಗೂ ಕೆಪಿಟಿಸಿಎಲ್ ಹಾಗೂ ವಿವಿಧ ಎಸ್ಕಾಂಗಳ ನೌಕರರು ಭಾಗವಹಿಸಿದ್ದರು.vtu

Key words: KPTCL, employees, Energy Department, Minister, KJ George

The post ಇಂಧನ ಇಲಾಖೆಯ ಬಲ ಕೆಪಿಟಿಸಿಎಲ್ ನೌಕರರು:  ಬೇಡಿಕೆಗಳಿಗೆ ಸ್ಪಂದನೆ ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...