16
July, 2025

A News 365Times Venture

16
Wednesday
July, 2025

A News 365Times Venture

ಇಚ್ಛಾಶಕ್ತಿಯ ಕೊರತೆಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ: ವಿಜಯಲಕ್ಷ್ಮಿ ಶಿಬರೂರು

Date:

ಮೈಸೂರು, ಜೂನ್, 03,2025 (www.justkannada.in): ಬುಡಕಟ್ಟು ಸಮುದಾಯಗಳ ಜನರ ಇಚ್ಛಾಶಕ್ತಿಯ ಕೊರತೆಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ವಿಜಯ ಟೈಮ್ಸ್‌ ನ ಪ್ರಧಾನ ಸಂಪಾದಕರಾದ ವಿಜಯಲಕ್ಷ್ಮಿ ಶಿಬರೂರು ಹೇಳಿದರು.

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬುಡಕಟ್ಟು ಶಿಕ್ಷಣ ಸಮಸ್ಯೆಗಳು ಮತ್ತು ಸವಾಲುಗಳು ಕುರಿತ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಬುಡಕಟ್ಟು ಮಕ್ಕಳ ಶಿಕ್ಷಣದಲ್ಲಿ ಮಾಧ್ಯಮದ ಪಾತ್ರ ವಿಷಯದ ಬಗ್ಗೆ ಮಾತನಾಡಿದರು.

ಹಾಡಿ ಜನರ ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿದ್ದು 8ನೇ ತರಗತಿ ಓದುತ್ತಿರುವ ಮಕ್ಕಳಿಗೆ ಮಗ್ಗಿ ಅಕ್ಷರಗಳೇ ಬರುತ್ತಿಲ್ಲ. ಶಿಕ್ಷಕರೇ ಮಕ್ಕಳಿಗೆ ಮೋಸ ಮಾಡುತ್ತಿದ್ದಾರೆ. ಇದನ್ನು ನೋಡಿದರೆ ಮನಸ್ಸಿಗೆ ನೋವಾಗುತ್ತದೆ. ಈ ವ್ಯವಸ್ಥೆಯ ಬದಲಾವಣೆಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಇಂದು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಬುಡಕಟ್ಟು ಸಮುದಾಯದ ಜನರು ಮಾಧ್ಯಮಗಳ ಜೊತೆ ಒಡನಾಡವಿಟ್ಟುಕೊಂಡು ನಿಮ್ಮದೇ ತಂಡ ಮಾಡಿಕೊಂಡು ನಿಮ್ಮದೇ ಯೂಟ್ಯೂಬ್ ಚಾನಲ್ ಮಾಡಿಕೊಂಡು ಸಮಸ್ಯೆಗಳನ್ನು ಪ್ರತಿದಿನ ಸರ್ಕಾರದ ಗಮನಕ್ಕೆ ತನ್ನಿರಿ. ಮೊಬೈಲ್‌ನಲ್ಲೇ ಸೆರೆಹಿಡಿದು ನಮಗೂ ಕಳುಹಿಸಿ. ನಿಮ್ಮ ಧ್ವನಿ ಏರಿಸಿ ಪ್ರಶ್ನೆ ಮಾಡಿದರೆ ಮಾಧ್ಯಮಗಳು ನಿಮ್ಮ ಹತ್ತಿರ ಬರುತ್ತವೆ. ಏನಾಗಬೇಕು. ಏನಾಗಿಲ್ಲ ಎಂಬುದನ್ನು ತಿಳಿಸಿ, ನಿಮ್ಮ ಜೊತೆಗೆ ನಾವಿದ್ದೇವೆ ಎಂದರು.

ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಬಿ.ಎಸ್. ಪ್ರಭಾ ಅರಸ್ ಮಾತನಾಡಿ ವಿಚಾರ ಸಂಕಿರಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 150 ಜನ ಆಗಮಿಸಿದ್ದರು. 22 ಜನ ಸಂಶೋಧನಾ ವಿದ್ವಾಂಸರಿಂದ ಸಂಶೋಧನಾ ಲೇಖನಗಳು ಮಂಡನೆಯಾದವು. 6 ಪ್ರಧಾನಗೋಷ್ಠಿಗಳಲ್ಲಿ ವಿಚಾರ ಮಂಡನೆ ಮಾಡಲಾಯಿತು. 53 ಆಶ್ರಮಶಾಲೆಗಳ ಶಿಕ್ಷಕರು, 54 ಜನ ವಿವಿಧ ವಿ.ವಿ.ಗಳ ಸಂಶೋಧಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 30 ಜನ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು. ಮುಖ್ಯ ಭಾಷಣಕಾರರು ಮತ್ತು ಲೇಖನಗಳನ್ನು ಮಂಡನೆ ಮಾಡಿದವರ ಅಭಿಪ್ರಾಯ ಸಲಹೆಗಳನ್ನು ಸಂಗ್ರಹಿಸಿ ಪ್ರಕಟಿಸಲಾಗುವುದು ಎಂದ ಅವರು, ಈ ವಿಚಾರ ಸಂಕಿರಣದ ಯಶಸ್ಸಿಗೆ ಕಾರಣರಾದವರೆಲ್ಲರಿಗೂ ಧನ್ಯವಾದ ತಿಳಿಸಿದರು.

ಸಮಾರಂಭದಲ್ಲಿ ಸಂಶೋಧನಾ ಅಧಿಕಾರಿ ಡಾ. ಶ್ರೀನಿವಾಸ್, ಪ್ರೊ.ವೆಂಕಟೇಶ್ ಕುಮಾರ್, ಡಾ.ದೀಪಾಭಟ್, ಡಾ.ಸಿ. ಮಾದೇಗೌಡ, ಡಾ.ಕಲಾವತಿ, ರತ್ನಮ್ಮ. ಪ್ರೊ.ಎಚ್.ಪಿ. ಜ್ಯೋತಿ, ಡಾ.ಕುಶಾಲ್ ಬರಗೂರು, ಡಾ.ಮೋಹನ್ ಕುಮಾರ್, ಲೆಕ್ಕಪರಿಶೋಧನಾಧಿಕಾರಿ ಭವ್ಯಾ ಬಿ.ಆರ್., ಡಾ.ಮಂಜುನಾಥ್, ರವಿಕುಮಾರ್, ಗುಣಧರ  ಹೇಮಚಂದ್ರ ಉಪಸ್ಥಿತರಿದ್ದರು.

Key words: Children, deprived ,education,  lack of willpower,  Vijayalakshmi Shibaruru

The post ಇಚ್ಛಾಶಕ್ತಿಯ ಕೊರತೆಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ: ವಿಜಯಲಕ್ಷ್ಮಿ ಶಿಬರೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...