ಚಿಕ್ಕಬಳ್ಳಾಪುರ,ಜೂನ್,11,2025 (www.justkannada.in): ಕಾಂಗ್ರೆಸ್ ಸಂಸದ ಮತ್ತು ಶಾಸಕರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಗೌರಿಬಿದನೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ. ತಪ್ಪನ್ನ ಬೆಂಬಲಿಸಲ್ಲ. ಯಾವುದೇ ಕಾರಣಕ್ಕೂ ತಪ್ಪುಗಳನ್ನ ನಾವು ಬೆಂಬಲಿಸುವುದಿಲ್ಲ ಎಂದರು.
ಇನ್ನೆರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕುಂಠಿತ ಆಗಿಲ್ಲ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಪಿಎಂ ಅಂತಾ ಇರುತ್ತೆ. ಆದರೆ ರಾಜ್ಯಸರ್ಕಾರದ ವಂತಿಗೆ ಹೆಚ್ಚಿರುತ್ತೆ. ಆಯುಸ್ಮಾನ್ ಭಾರತ ಯೋಜನೆಯಲ್ಲಿ ರಾಜ್ಯದ ವಂತಿಗೆ ಹೆಚ್ಚು ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: ED, raid, Action, Congress, MP, MLAs, CM Siddaramaiah
The post ಇಡಿ ದಾಳಿ ವಿಚಾರ: ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಿ – ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.