ಬೆಂಗಳೂರು,ಮೇ,14,2025 (www.justkannada.in): ಇನ್ಮುಂದೆ ರಾಜ್ಯ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸಲ್ಲ, ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವೀಸ್ ನೀಡುತ್ತದೆ ಎಂದು ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಮಂಡಳಿಗೆ ಹರೀಶ್ ಇಂಜಾಡಿ ಆಯ್ಕೆಯ ಆಕ್ಷೇಪ ವ್ಯಕ್ತವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ನಾನು ಯಾರಿಗೂ ಶಿಫಾರಸು ಮಾಡಿಲ್ಲ. ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು. ಇದರ ಬಗ್ಗೆ ಮುಜರಾಯಿ ಸಚಿವರ ಜೊತೆ ಮಾತನಾಡುತ್ತೇನೆ. ನಿಯಮ ಪ್ರಕಾರ ಹರೀಶ್ ನನ್ನು ಬದಲಾವಣೆ ಮಾಡಲು ಆಗಲ್ಲ. 3 ವರ್ಷ ಅಧಿಕಾರಾವಧಿ ಇರುತ್ತೆ ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.
Key words: state government, 108 ambulance, service, Minister, Dinesh Gundu Rao
The post ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಣೆ -ಸಚಿವ ದಿನೇಶ್ ಗುಂಡೂರಾವ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




