12
August, 2026

A News 365Times Venture

12
Wednesday
August, 2026

A News 365Times Venture

 ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

Date:

ಬೆಂಗಳೂರು, ಆಗಸ್ಟ್ 12,2026 (www.justkannada.in): ರಾಜ್ಯ ಸರ್ಕಾರ ಬುಧವಾರ ಮಹತ್ವದ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದು, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ಸರ್ಕಾರದ ಅಧಿಸೂಚನೆಯಂತೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ನೀಡಲಾಗಿದೆ. ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.

ಇದೇ ವೇಳೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರಿಗೂ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.

ಇನ್ನೊಂದೆಡೆ, ಮೈಸೂರು ತಾಲ್ಲೂಕಿನ ನಾಗವಾಲ ಗ್ರಾಮದ ಸಿ. ನರೇಂದ್ರ ಬಿನ್ ಹೆಚ್.ಕೆ. ಚಂದ್ರಶೇಖರ್ ಅವರನ್ನು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.

ಮೂರು ನೇಮಕಾತಿಗಳಿಗೂ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.

Key words: Important responsibility, two MLAs,

The post  ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ

ಬೆಂಗಳೂರು, ಆಗಸ್ಟ್, 12,2026 (www.justkannada.in):  ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ...

ಶಶಿಧರ. ಎಸ್ ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

ಮೈಸೂರು,ಆಗಸ್ಟ್,12,2026 (www.justkannada.in):  ಶಶಿಧರ. ಎಸ್ ಅವರಿಗೆ ಇತಿಹಾಸ ವಿಷಯದಲ್ಲಿ ಮೈಸೂರು ವಿಶ್ವ...

ನಾಳಿನ ಬಂದ್ ನಿಂದ ಪ್ರಯೋಜನವಿಲ್ಲ: ತೊಂದರೆ ಆಗದಂತೆ ಕ್ರಮ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,12,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ...

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ

ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ...