8
July, 2025

A News 365Times Venture

8
Tuesday
July, 2025

A News 365Times Venture

ಈಗ ಎಲ್ಲರೂ ಮೀಸಲಾತಿ ಪರವಾಗಿದ್ದಾರೆ: ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ- ಸಿ.ಎಂ ಸಿದ್ದರಾಮಯ್ಯ

Date:

ಬೆಂಗಳೂರು ಏಪ್ರಿಲ್, 5,2025 (www.justkannada.in):  ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು.

ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ 10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು. ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ ಎಂದರು.

ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ  ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು.

ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ. ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು.

ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹೀಗಾಗಿ ಮಹಾನ್ ಚೇತನ ಬಾಬು ಜಗಜೀವನ್ ರಾಮ್ ಅವರ ಕಾಳಜಿಗಳನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟರುವ ಹೆಜ್ಜೆ ಗುರುತುಗಳನ್ನು ಪಾಲಿಸಬೇಕು. ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು. ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Key words: everyone, favor, reservation, CM Siddaramaiah

The post ಈಗ ಎಲ್ಲರೂ ಮೀಸಲಾತಿ ಪರವಾಗಿದ್ದಾರೆ: ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ- ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...