26
February, 2026

A News 365Times Venture

26
Thursday
February, 2026

A News 365Times Venture

ಈ ಬಾರಿ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರುತ್ತೆ – ಕೆ.ವಿ.ಪ್ರಭಾಕರ್ ಭರವಸೆ

Date:

ಬೀದರ್ ಫೆಬ್ರವರಿ, 23,2026 (www.justkannada.in):  ಪತ್ರಕರ್ತ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್ ನಲ್ಲೂ ಸಿಹಿಸುದ್ದಿ ಇರುತ್ತೆ.  ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ ಅನುಕೂಲಗಳು ಆಗುವ ಭರವಸೆ ಇದೆ ಎಂದು  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಕೆ.ವಿ ಪ್ರಭಾಕರ್ ಮಾತನಾಡಿದರು. ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ‌ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ. ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಮ್ಮೇಳನಗಳು ಒಂದು ಅರ್ಥದಲ್ಲಿ “ಪಿಟ್ ಸ್ಟಾಪ್ಸ್” ಎಂದು ಹೇಳಬಹುದು. ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ. ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ  ಉದ್ಯಮಕ್ಕೆ ಈಗ ಇಂಥಾ ಪಿಟ್ ಸ್ಟಾಪ್ಸ್ ಗಳ ಅಗತ್ಯ ತುಂಬ ಇದೆ ಎಂದು ವಿವರಿಸಿದರು.

ಈ ಸಮ್ಮೇಳನ ವೃತ್ತಿಪರರಿಗೆ ತಮ್ಮ ನೋಟಗಳನ್ನು, ಆಯ್ಕೆಗಳನ್ನು ಮತ್ತು ವೃತ್ತಿಪರತೆಯನ್ನು ತೀಕ್ಷ್ಣಗೊಳಿಸಿಕೊಳ್ಳಲು ಮತ್ತು ಅವರ ಆಂತರಿಕ ದಿಕ್ಸೂಚಿಯನ್ನು ಮರು ಚಿಂತನಗೆ ಒಳಪಡಿಸಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ ಎನ್ನುವ ಭರವಸೆ ಇದೆ ಎಂದು ಆಶಿಸಿದರು.‌

ಕೃತಕ ಬುದ್ದಿಮತ್ತೆ ತಂತ್ರಜ್ಞಾನ-ಚಾಲಿತ ಯುಗದಲ್ಲಿ ನಮ್ಮ ಕೌಶಲ್ಯಗಳನ್ನು ನವೀಕರಣಗೊಳಿಸಿಕೊಳ್ಳುವುದರ ಜೊತೆಗೆ‌ ಪತ್ರಿಕೋದ್ಯಮದ ಆದ್ಯತೆಗಳನ್ನೂ ಮರು ಪರಿಶೀಲನೆಗೆ ಚರ್ಚೆಗೆ ಒಳಪಡಿಸಬೇಕಿದೆ. ಇವತ್ತಿನ ತಾಂತ್ರಿಕ ವೇಗ ಮತ್ತು ಹೊಸ ಹೊಸ ತಂತ್ರಜ್ಞಾನದ ವೇಗದಲ್ಲಿ ಬಹುತೇಕ ಪ್ರತಿ ಐದು ವರ್ಷಗಳಿಗೆ ಒಮ್ಮೆ ನಾವು ಕಲ್ಪಿಸಕೊಳ್ಳಲಾಗದ ತಂತ್ರಜ್ಞಾನ‌ ಹೊರಗೆ ಬರುತ್ತಿವೆ. ಹೊಸದಾಗಿ ಬಂದಿರುವ AI ತಂತ್ರಜ್ಞಾನದ ಸಾಧ್ಯತೆಗಳನ್ನು ಮತ್ತು ಅಪಾಯಗಳನ್ನು ನಾವು ಸರಿಯಾಗಿ ಗ್ರಹಿಸವ ಮೊದಲೇ ಹೊಸ ತಂತ್ರಜ್ಞಾನ‌ ಬಂದಿರುತ್ತದೆ. ಈಗಾಗಲೇ‌ AI ಕೂಡ ಹಳತಾಗಿ “Super AI” ಅಂತ ಬರುತ್ತಿದೆ ಎಂದು ಎಚ್ಚರಿಸಿದರು.‌

ಇವೆಲ್ಲವನ್ನೂ ಅರಿಯುವ ಮತ್ತು ಅಪಾಯಗಳನ್ನು ತಡೆಯುವ ಕಾರ್ಯಾಗಾರವಾಗಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸುತ್ತೇನೆ ಎಂದರು.

ಡೀಪ್‌ ಫೇಕ್‌ ಗಳನ್ನು ಹೇಗೆ ಗುರುತಿಸುವುದು ಮತ್ತು ಸಾಮಾಜಿಕ ಮಾಧ್ಯಮ ಲೀಡ್‌ ಗಳನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು News room ಗಳು  ಕಲಿಸಬೇಕಾಗಿದೆ. ಮಾಧ್ಯಮ ಲೋಕದ ಕಾರ್ಪುರೇಟೀಕರಣದ ತಂದೊಡ್ಡಿರುವ ನೈತಿಕ ಸವಾಲುಗಳ ನಡುವೆಯೇ ಈಗ AI ಮತ್ತು ಆಧುನಿಕ ತಂತ್ರಜ್ಞಾನವೂ ಹೊಸ ಹೊಸ ನೈತಿಕ ಸವಾಲುಗಳನ್ನು ಮುಂದಿಟ್ಟಿದೆ. ಹೀಗಾಗಿ, ನೈತಿಕ ಮತ್ತು ತಾಂತ್ರಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಗೆ ಸಮ್ಮೇಳನ ವೇದಿಕೆಯಾಗಲಿ ಎಂದು ನಾನು ಬಯಸುತ್ತೇನೆ ಎಂದರು.

ಈ ಬಜೆಟ್ ನಲ್ಲೂ ಬಂಪರ್

ಪತ್ರಕರ್ತ ಸಮುದಾಯಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್ ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ಅನುಕೂಲಗಳು ಆಗುವ ಭರವಸೆ ಇದೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಈಶ್ವರ್ ಖಂಡ್ರೆ, ರಹೀಮ್ ಖಾನ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮದನ್ ಗೌಡರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ ಸೇರಿ ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: 40th Working Journalists’ Conference, KV Prabhakar, Website, launch

The post ಈ ಬಾರಿ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರುತ್ತೆ – ಕೆ.ವಿ.ಪ್ರಭಾಕರ್ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉರ್ದು ಜಾಹೀರಾತು: ವಿಪಕ್ಷದ ನಾಯಕರ ಟೀಕೆಗಳಿಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,26, 2026 (www.justkannada.in): ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತು ನೀಡಿದಕ್ಕೆ...

ಸುಲಲಿತ ವಾಣಿಜ್ಯ ಸಂಸ್ಕೃತಿಗೆ ಸಂಕಲ್ಪ: ಬಾಕಿ ಇರುವ 28 ಸೇವೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ MB ಪಾಟೀಲ್ ಸೂಚನೆ

ಬೆಂಗಳೂರು,ಫೆಬ್ರವರಿ,26,2026 (www.justkannada.in): ರಾಜ್ಯದಲ್ಲಿ ಸುಲಲಿತ ವಾಣಿಜ್ಯ ಸಂಸ್ಕೃತಿಯನ್ನು ತರಲು ರಾಜ್ಯ ಸರಕಾರವು...

ವ್ಯಕ್ತಿಗೆ ಸೈಜುಗಲ್ಲಿನಿಂದ ಜಜ್ಜಿ ಅಮಾನವೀಯ ಹಲ್ಲೆ: 11 ಮಂದಿ ಅಂದರ್

ಮಂಡ್ಯ,ಫೆಬ್ರವರಿ,26,2026 (www.justkannada.in):   ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ  ಸೈಜುಗಲ್ಲಿನಿಂದ  ಕಾಲನ್ನ ಜಜ್ಜಿ ಕ್ರೂರವಾಗಿ...

ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ

ಬೆಂಗಳೂರು,ಫೆಬ್ರವರಿ,26,2026 (www.justkannada.in):  ಕೂಡಲೇ ನೇಮಕಾತಿ ಆರಂಭಕ್ಕೆ ಆರಂಭಕ್ಕೆ ಖಾಲಿ ಹುದ್ದೆಗಳ ಭರ್ತಿಗೆ...