ಬೆಳಗಾವಿ,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ ಸಂಬಂಧ ಉಗ್ರರನ್ನ ಸದೆಬಡೆಯಲು ಕೇಂದ್ರ ಕೈಗೊಳ್ಳುವ ನಿರ್ಧಾರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.
ಈ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದರು.
Key words: Pahalgam, terrorists, Attack, Minister, Lakshmi Hebbalkar
The post ಉಗ್ರರನ್ನ ಸದೆಬಡೆಯಲು ಕೇಂದ್ರ ಕೈಗೊಳ್ಳುವ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.