11
July, 2025

A News 365Times Venture

11
Friday
July, 2025

A News 365Times Venture

ಉಗ್ರರ ನೆಲೆ ಧ್ವಂಸಗೊಳಿಸಿ ಪರಾಕ್ರಮ ಮೆರೆದ ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ- ಸಿಎಂ ಸಿದ್ದರಾಮಯ್ಯ ಅಭಿನಂದನೆ

Date:

ಬೆಂಗಳೂರು,ಮೇ,7,2025 (www.justkannada.in):  ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ ಭಾರತೀಯ ಸೇನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ಕಾವೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಸಿಎಂ ಸಿದ್ದರಾಮಯ್ಯ,  ಅಪರೇಷನ್ ಸಿಂಧೂರ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನ ಧ್ವಂಸಗೊಳಿಸಿ ಪರಾಕ್ರಮ ಮೆರೆದ ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ ಎಂದಿದ್ದಾರೆ.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ  ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ.  ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ  ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ.

ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ 26 ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ.  ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ  ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ  ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Operation Sindhoora,  big salute, our soldiers, CM Siddaramaiah

The post ಉಗ್ರರ ನೆಲೆ ಧ್ವಂಸಗೊಳಿಸಿ ಪರಾಕ್ರಮ ಮೆರೆದ ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ- ಸಿಎಂ ಸಿದ್ದರಾಮಯ್ಯ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು, ಜುಲೈ 11,2025 (www.justkannada.in): ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ...

KSOU: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ “ಉಚಿತ ಶಿಕ್ಷಣ” ಗ್ಯಾರಂಟಿ.

ಮೈಸೂರು, ಜು.೧೦,೨೦೨೫:  ಇನ್ಮುಂದೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯದ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು,ಜುಲೈ,10,2025 (www.justkannada.in):  ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ...

ಆಸ್ತಿ ಕಬಳಿಕೆಗೆ ಸಂಚು: ಐವರ ವಿರುದ್ದ ಪ್ರಕರಣ ದಾಖಲು

ಮೈಸೂರು,ಜುಲೈ,10,2025 (www.justkannada.in): ಅಸಲಿ ವ್ಯಕ್ತಿ ಇದ್ದರೂ ಸಹ  ಆಸ್ತಿ ಕಬಳಿಸಲು ಸಂಚು...