ನವದೆಹಲಿ,ಮಾರ್ಚ್,9,2025 (www.justkannada.in): ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ತೀವ್ರ ನಿಗಾ ಘಟಕಕ್ಕೆ (ಸಿಸಿಯು) ದಾಖಲಿಸಲಾಗಿದೆ. , ಏಮ್ಸ್ ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ್ ಅವರ ನೇತೃತ್ದವದಲ್ಲಿ ಜಗದೀಪ್ ಧನ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯ ಸ್ಥಿರವಾಗಿದ್ದು ವೈದ್ಯಕೀಯ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಏಮ್ಸ್ ಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
Key words: Vice President, Jagdeep Dhankar, hospital, chest pain
The post ಉಪರಾಷ್ಟ್ರಪತಿ `ಜಗದೀಪ್ ಧನ್ಕರ್’ ಅವರಿಗೆ ಎದೆನೋವು: ಆಸ್ಪತ್ರೆಗೆ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.