29
September, 2026

A News 365Times Venture

29
Tuesday
September, 2026

A News 365Times Venture

ಉಪ್ಪು ಸೇವನೆ ಕುರಿತು ಮಾರ್ಗಸೂಚಿ: ನಿಯಮ ಪಾಲಿಸಲು ಸಚಿವ ಯು.ಟಿ ಖಾದರ್ ಮನವಿ

Date:

ಬೆಂಗಳೂರು, ಸೆಪ್ಟಂಬರ್, 29,2026 (www.justkannada.in): ಉಪ್ಪು ಸೇವನೆ ಕುರಿತು ಹೊಸ ಮಾರ್ಗಸೂಚಿ ಹೊರಡಿಸಲು ರಾಜ್ಯ ಆರೋಗ್ಯ ಇಲಾಖೆಯು ಮುಂದಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯುಟಿ ಖಾದರ್, ಅತಿಯಾದ ಉಪ್ಪು ಸೇವನೆ ಒಳ್ಳೆಯದಲ್ಲ. ಉಪ್ಪು ಸೇವನೆ ಕುರಿತು ಮಾರ್ಗಸೂಚಿ ತರಲು ಸಿದ್ಧತೆ ನಡೆಸಿದ್ದೇವೆ ಹೀಗಾಗಿ ನಿಯಮಗಳನ್ನ ಸಾರ್ವಜನಿಕರು ಪಾಲಿಸಬೇಕು ಎಂದು ಮನವಿ ಮಾಡಿದರು.

ಈ ಕುರಿತು ಮಾತನಾಡಿದ ಸಚಿವ ಯು.ಟಿ ಖಾದರ್, ಆರೋಗ್ಯಪೂರಕವಾದ ಉಪ್ಪು ಮಾರುಕಟ್ಟೆಗೆ ಬರಬೇಕು. ಈ ಉದ್ದೇಶದಿಂದ ಉಪ್ಪು ಸೇವನೆ ಬಗ್ಗೆ ಮಾರ್ಗಸೂಚಿ ತರಲು ನಿರ್ಧಾರ ಮಾಡಿದ್ದೇವೆ. ಉಪ್ಪಿನ ದರ ದುಬಾರಿ ಆದರೂ ಚಿಂತೆ ಇಲ್ಲ. ಜನ ಆಗ ಕಡಿಮೆ ಸೇವಿಸ್ತಾರೆ. ಆರೋಗ್ಯಕಪೂರಕವಾಗಿರಬೇಕು, ಎಷ್ಟು ಅಗತ್ಯವೋ ಅಷ್ಟು ಮಾತ್ರ ತೆಗೆದುಕೊಳ್ಳಬೇಕು ಎಂದರು.

ಉಪ್ಪನ್ನು ಔಷಧ ರೀತಿಯಲ್ಲಿ ಬಳಸಬೇಕು. ಉಪ್ಪಿನ ಪ್ಯಾಕೆಟ್ ಮೇಲೂ ಅಗತ್ಯಕ್ಕಿಂತ ಉಪ್ಪು ಸೇವನೆ ಮಾಡಿದರೇ ಏನೇನು ಆರೋಗ್ಯ ಸಮಸ್ಯೆ, ರೋಗ ಬರುತ್ತದೆ ಎಂದು ಮುದ್ರಿಸಬೇಕು. ಜನರು, ಆರೋಗ್ಯ ಇಲಾಖೆಯ ನಿಯಮ ಪಾಲಿಸಬೇಕು. ಶಾಲಾ-ಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದೇವೆ. ಇದಕ್ಕಾಗಿ ತಜ್ಞರು ಸಂಶೋಧನೆ ಮಾಡಿ, ಮಾಹಿತಿ ಕೊಡಲಿದ್ದಾರೆ. ಆರೋಗ್ಯಕ್ಕೆ ಮಾರಕವಾದ ಯಾವುದೇ ಆಹಾರ ಪದ್ಧತಿ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು  ಸಚಿವ ಯುಟಿ ಖಾದರ್ ತಿಳಿಸಿದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ ಹೆಮ್ಮೆಯ ವಿಷಯ-ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್, 29,2026 (www.justkannada.in): ದೇಶದ ಆಯ್ದ 50 ನಗರಗಳನ್ನು ಮಾದರಿ...

ಅ.5ರೊಳಗೆ ಯುಜಿ ಕೇಬಲ್ ಕಾಮಗಾರಿ ಪೂರ್ಣಗೊಳಿಸಿ- ರಮೇಶ್ ಬಂಡಿಸಿದ್ದೇಗೌಡ ಕಟ್ಟುನಿಟ್ಟಿನ ಸೂಚನೆ

ಮೈಸೂರು, ಸೆಪ್ಟಂಬರ್,29, 2026 (www.justkannada.in):  ನಗರದಲ್ಲಿ ಚಾಲ್ತಿಯಲ್ಲಿರುವ ಭೂಗತ ವಿದ್ಯುತ್ ಕೇಬಲ್...

ನೈಸ್ ಯೋಜನೆ:  AK-DK ಭಾಂದವ್ಯದಲ್ಲಿ 3 ಲಕ್ಷ ಕೋಟಿಗಿಂತ ಹೆಚ್ಚು ಅವ್ಯವಹಾರ- ಚರ್ಚೆಗೆ ಸಿಎಂಗೆ  ಹೆಚ್ ಡಿಕೆ ಪಂಥಾಹ್ವಾನ

ಬೆಂಗಳೂರು,ಸೆಪ್ಟಂಬರ್,29,2026 (www.justkannada.in): ನೈಸ್ ಯೋಜನೆಯಲ್ಲಿ 3 ಲಕ್ಷ ಕೋಟಿಗಿಂತ ಹೆಚ್ಚು ಅವ್ಯವಹಾರ...

ಮೂಲಸ್ಥಳದಲ್ಲೇ ಡಾ.ರಾಜ್ ಪುತ್ಥಳಿ ಪುನರ್ ಸ್ಥಾಪನೆ; ಸಚಿವ ಡಾ.ಯತೀಂದ್ರ ನೇತೃತ್ವದ ಸಭೆ ನಿರ್ಧಾರ

ಮೈಸೂರು, ಸೆಪ್ಟಂಬರ್,29, 2026 (www.justkannada.in): ದಸರಾ ವಸ್ತುಪ್ರದರ್ಶನದ ಆವರಣದಲ್ಲಿದ್ದ ವರನಟ ಡಾ.ರಾಜ್‌...