17
April, 2026

A News 365Times Venture

17
Friday
April, 2026

A News 365Times Venture

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದ ಬಿಜೆಪಿ

Date:

ಬೆಂಗಳೂರು,ಏಪ್ರಿಲ್,7,2026 (www.justkannada.in): ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು  ಬಿಜೆಪಿ, ಆರ್ ಎಸ್ ಎಸ್ ವಿರುದ್ದ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ (DGP) ರಾಜ್ಯ ಬಿಜೆಪಿ ದೂರು ನೀಡಿದೆ.

ಶಾಸಕರಾದ ಎಸ್. ಮುನಿರಾಜು, ಸಿ.ಕೆ. ರಾಮಮೂರ್ತಿ, ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ಮುಖಂಡರ ನಿಯೋಗವು ಇಂದು  ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ದೂರು ನೀಡಿದ್ದಾರೆ.

ದೂರಿನಲ್ಲಿ ಖರ್ಗೆ ಅವರ ಭಾಷಣದ ತುಣುಕನ್ನು ಉಲ್ಲೇಖಿಸಿದ್ದು, “ಕುರಾನ್‌ನಲ್ಲಿ ಬರೆದಿದೆ, ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಆರ್.ಎಸ್.ಎಸ್/ಬಿಜೆಪಿ ಕೂಡ ಅದೇ ರೀತಿಯ ವಿಷಸರ್ಪಗಳು. ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ” ಎಂದು ಹೇಳುವ ಮೂಲಕ ಮುಸ್ಲಿಮರನ್ನು ಬಿಜೆಪಿ ಆರ್ ಎಸ್ ಎಸ್ ವಿರುದ್ದ ಎತ್ತಿಕಟ್ಟಿದ್ದಾರೆ. ಹೀಗಾಗಿ  ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

Key words: BJP, complaint, against, AICC President, Mallikarjun Kharge

The post ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದ ಬಿಜೆಪಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...