ಬೆಂಗಳೂರು, ಫೆಬ್ರವರಿ 17,2025 (www.justkannada.in): ಸಿಎಂ ಸಿದ್ದರಾಮಯ್ಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ಗೆ ತಿರುಗೇಟು ನೀಢಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ನಾವು ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ, ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಕಲಿಯಬೇಕಿಲ್ಲ ಎಂದು ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟರು.
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಹೈಕಮಾಂಡ್ ಏಕಪಕ್ಷೀಯವಾಗಿ ನಿರ್ಧಾರವೇನೂ ಮಾಡಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲೇಬೇಕು. ನಾವು ತಪ್ಪು ಮಾಡಿದ್ದರೇ ಮಾತ್ರ ಎಚ್ಚರಿಕೆ ಕೊಡಬೇಕು. ನಾವೇನೂ ತಪ್ಪು ಮಾಡಿಲ್ಲ. ಯಾರು ಕೂಡ ಹೈಕಮಾಂಡ್ ವಿರುದ್ಧ ಇಲ್ಲ ಎಂದರು.
Key words: Don’t, misuse, AICC, name, Minister, KN Rajanna, DCM DK Shivakumar
The post ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ ಗೆ ಸಚಿವ ಕೆಎನ್ ರಾಜಣ್ಣ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.