12
December, 2025

A News 365Times Venture

12
Friday
December, 2025

A News 365Times Venture

ಎಸ್.ಸಿ-ಎಸ್.ಟಿ ದೌರ್ಜನ್ಯ ಪ್ರಕರಣ: ತುರ್ತು ಕ್ರಮಕ್ಕೆ  ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಸೂಚನೆ

Date:

ಮೈಸೂರು ಮಾರ್ಚ್,28,2025 (www.justkannada.in): ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪಡುವಾರಳ್ಳಿಯಲ್ಲಿರುವ  ಬಾಬು ಜಗಜೀವನ ರಾಮ್ ಭವನ ಸಭಾಂಗಣದಲ್ಲಿ ಶುಕ್ರವಾರ (ಮಾ. 28ರಂದು) ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ‌ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚಿಸಿದರು.  ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ .ಸಿ ಹಾಗೂ ಎಸ್.ಟಿ. ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿಯು ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ನಗರದಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ದೂರುಗಳು ಬಂದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ರೀತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ  ಅವರು ಅನುಸೂಚಿತ ಜಾತಿ/ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆ ನಿರ್ವಹಿಸಿದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Key words: SC-ST atrocities case, Mysore, DC, G. LakshmikanthaReddy

The post ಎಸ್.ಸಿ-ಎಸ್.ಟಿ ದೌರ್ಜನ್ಯ ಪ್ರಕರಣ: ತುರ್ತು ಕ್ರಮಕ್ಕೆ  ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...