4
March, 2026

A News 365Times Venture

4
Wednesday
March, 2026

A News 365Times Venture

ಐತಿಹಾಸಿಕ ದಾಖಲೆ, ನಾಣ್ಯಗಳ ಪ್ರದರ್ಶನ: ವಿದ್ಯಾರ್ಥಿಗಳು ಆರೋಗ್ಯಕರ ಹವ್ಯಾಸ ಬೆಳೆಸಿಕೊಳ್ಳಬೇಕು – ಮಧುಕರ್

Date:

ಮಂಡ್ಯ,ಮೇ,15,2025 (www.justkannada.in): ಇಂದು ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಇತಿಹಾಸ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದ ವತಿಯಿಂದ ಒಂದು ದಿನದ ಐತಿಹಾಸಿಕ ದಾಖಲೆಗಳು ಬಿತ್ತಿ ಪತ್ರ ಪ್ರದರ್ಶನ ಹಾಗೂ ನಾಣ್ಯಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಾಲೇಜು ಪ್ರಾಂಶುಪಾಲ ಡಾ. ಗುರುರಾಜ ಪ್ರಭು.ಕೆ  ಮತ್ತು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಾಣ್ಯ ಸಂಗ್ರಹಕಾರ ಮಧುಕರ್ ಅವರು ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ಪ್ರದರ್ಶನ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ಮಧುಕರ್,  ವಿದ್ಯಾರ್ಥಿಗಳು ಇಂತಹ ಆರೋಗ್ಯಕರ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಇತಿಹಾಸದ ಬಗ್ಗೆ ಕುತೂಹಲವನ್ನು ಹಾಗೂ ಅಧ್ಯಯನವನ್ನು ಮಾಡಬೇಕು. ನಾಣ್ಯಗಳು ಆಯಾ ಕಾಲದ ಆರ್ಥಿಕ ಸ್ಥಿತಿಗಳು ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತವೆ. ಇತಿಹಾಸವನ್ನು ಕಟ್ಟಲು ನಾಣ್ಯಗಳು ಪ್ರಾಥಮಿಕ ಆಕರಗಳಾಗುತ್ತವೆ ಆದುದರಿಂದ ವಿದ್ಯಾರ್ಥಿಗಳಾದ ತಾವು ಇಂತಹ ವಿಶೇಷ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ವಿವರಿಸಿದರು .

ಸ್ನಾತಕ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಕೃಷ್ಣೇಗೌಡ ಅವರು ಮಾತನಾಡಿ,  ಇತಿಹಾಸ ಒಂದು ವಿಜ್ಞಾನ ಹೆಚ್ಚು ಅಲ್ಲ ಕಡಿಮೆಯೂ ಅಲ್ಲ ಎನ್ನುವ ಹೇಳಿಕೆಯನ್ನು ನೀಡುವುದರ ಮೂಲಕ ವೈಜ್ಞಾನಿಕ ತಳಹದಿಯ ಮೇಲೆ ಇತಿಹಾಸ ನಿಂತಿದೆ.  ಆಧಾರಗಳು ಇಲ್ಲದೆ ಇತಿಹಾಸವನ್ನು ರಚಿಸಲು ಸಾಧ್ಯವಿಲ್ಲ ಆದುದರಿಂದ ಹಳೆಯ ತಾಳೇಗರಿಗಳು ಸ್ಮಾರಕಗಳು ನಾಣ್ಯಗಳು ಮೊದಲಾದವುಗಳನ್ನು ಸಂರಕ್ಷಿಸ ಬೇಕಾಗಿದ್ದು ಇತಿಹಾಸ ವಿದ್ಯಾರ್ಥಿಗಳ ಪ್ರಮುಖ ಕರ್ತವ್ಯ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ ಪ್ರಭು.ಕೆ ಅವರು ಅಧ್ಯಕ್ಷತೆ ವಹಿಸಿ ಇತಿಹಾಸವನ್ನು ಪುನರ್ ನಿರ್ಮಿಸುವಲ್ಲಿ ಮತ್ತು ಇತಿಹಾಸವನ್ನು ಮುಂದಿನ ಜನಾಂಗಕ್ಕೆ ಕೊಂಡೊಯ್ಯುವಲ್ಲಿ ವಿದ್ಯಾರ್ಥಿ ಯುವಕರ ಪಾತ್ರವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಚೋಳರ ಕಾಲದ ನಾಣ್ಯಗಳಿಂದ ಹಿಡಿದು ಹಿಂದಿನವರೆಗೆ ನಾಣ್ಯಗಳು ಬೆಳೆದು ಬಂದ ಬಗೆ ವಿವಿಧ ಮಾದರಿಯ ನೋಟುಗಳು ವಿದೇಶಿ ನೋಟುಗಳು ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳು ಮೊದಲಾದವುಗಳನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅತ್ಯಂತ ಕುತೂಹಲದಿಂದ ಪ್ರದರ್ಶನದಲ್ಲಿ ಭಾಗವಹಿಸಿದರು.

ಈ ಪ್ರದರ್ಶನದಲ್ಲಿ 1940 ರಿಂದ ಪ್ರಸ್ತುತದವರೆಗೂ ಹಳೆಯ ವಾರಪತ್ರಿಕೆಗಳು ದಿನಪತ್ರಿಕೆಗಳನ್ನು ಪ್ರದರ್ಶಿಸಲಾಯಿತು. 1947ರ ಸ್ವಾತಂತ್ರ್ಯ ದಿನಾಚರಣೆಯ ದಿನದ ಪತ್ರಿಕೆ, ಗಣರಾಜ್ಯ ದಿನದ ಪತ್ರಿಕೆ, ಕರ್ನಾಟಕ ಏಕೀಕರಣದ ಪತ್ರಿಕೆ, ಮೊದಲಾದ ಮಹತ್ವದ ದಿನದ ಪತ್ರಿಕೆಯ ಮುಖಪುಟಗಳನ್ನು ವಿದ್ಯಾರ್ಥಿಗಳು ಕುತೂಹಲದಿಂದ ನೋಡಿದರು.ಈ ಸಂದರ್ಭದಲ್ಲಿ ಪ್ರಜಾಮತ, ಸಂಜೆಯ ಕರ್ನಾಟಕ, ನಂದ  ಗೋಕುಲ,ನವಜೀವನ, ಯುಗವಾಣಿ,ಸಂಯುಕ್ತ ಕರ್ನಾಟಕ, ತಾಯಿನುಡಿ, ನವಯುಗ, ಪ್ರಜಾವಾಣಿ ಮೊದಲಾದ ಹಳೆಯ ಪತ್ರಿಕೆಗಳನ್ನು ಪ್ರದರ್ಶನ ಮಾಡಲಾಯಿತು.

ಐತಿಹಾಸಿಕ ದಾಖಲೆಗಳಾದ ತಾಳೇಗರಿ ಹಾಗೂ ಕೋರ ಬಟ್ಟೆಯಿಂದ ನಿರ್ಮಿತವಾದ ಹಳೆಯ ದಾಖಲೆಯನ್ನು ಪ್ರದರ್ಶಿಸಲಾಯಿತು.  ಹಾಗೂ ವಿದ್ಯಾರ್ಥಿನಿಯರಿಂದ ಭಾರತದ ಇತಿಹಾಸದ ವಿವಿಧ ಮಾದರಿಗಳನ್ನು ಪೋಸ್ಟರ್ ಗಳನ್ನು ರಚಿಸಿ ಅದರ ಮಹತ್ವವನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ಹಾಗೂ ಕ್ರೆಡಿಟ್ ಆಫ್ ವಾರ್ ಎನ್ನುವ ಗೋಡೆ ಬರಹದ ಮೂಲಕ ಹಲವು ಮಹನೀಯರ ಶಾಂತಿ ಸಾರುವ ಹೇಳಿಕೆಗಳು ಮತ್ತು ಯುದ್ಧದ  ಭೀಬತ್ಸ ಚಿತ್ರಗಳನ್ನು ಪ್ರದರ್ಶಿಸಿ ಜಗತ್ತಿಗೆ ಶಾಂತಿಯ ಮಹತ್ವವನ್ನು ಸಾರಿದರು.

ಈ ಸಂದರ್ಭದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಶಿವರಾಮು ಎಸ್  ಇತಿಹಾಸವನ್ನು ಕಟ್ಟುವಲ್ಲಿ ದಾಖಲೆಗಳ ಮಹತ್ವವನ್ನು ತಿಳಿಸಿದರು.  ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಡಾ. ಕವಿತಾ ,  ಶಾಂತರಾಜು ಟಿ ಎನ್, ಹಿರಿಯ ಪ್ರಾಧ್ಯಾಪಕರಾದ ಭರತ್ ರಾಜ್, ಪದ್ಮನಾಭ ಕೆ.ಎ. ಆಂಗ್ಲ ಭಾಷಾ ವಿಭಾಗದ ಪ್ರಸನ್ನ ಕುಮಾರ್ ಕೆಎಂ ಉಪಸ್ಥಿತರಿದ್ದರು.

Key words: Historical record, coin show, Mandya, Students

The post ಐತಿಹಾಸಿಕ ದಾಖಲೆ, ನಾಣ್ಯಗಳ ಪ್ರದರ್ಶನ: ವಿದ್ಯಾರ್ಥಿಗಳು ಆರೋಗ್ಯಕರ ಹವ್ಯಾಸ ಬೆಳೆಸಿಕೊಳ್ಳಬೇಕು – ಮಧುಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...