23
August, 2026

A News 365Times Venture

23
Sunday
August, 2026

A News 365Times Venture

ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು: ಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಆಗಸ್ಟ್,18,2026 (www.justkannada.in): “ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನೀರ್ ಸೇಲ್ವಂ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆ ಇರುತ್ತದೆ. ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸವನ್ನು ಮಾಡಲಿ. ನಾವು ನಮ್ಮ ಕೆಲಸವನ್ನು ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನಾನು ಬಯಸುವುದಿಲ್ಲ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳಬೇಕು, ರಕ್ಷಿಸಬೇಕು” ಎಂದು ತಿಳಿಸಿದರು.

ಪ್ರಕರಣದ ತನಿಖೆ ಆಗಬೇಕು ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ನಾನು ಇದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆ. ಅವರು ತಮ್ಮ ಕೆಲಸವನ್ನು ಮಾಡಬೇಕು, ನಾವು ನಮ್ಮ ಕೆಲಸವನ್ನು ಮಾಡಬೇಕು” ಎಂದು  ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: no interference, administration, another state, CM, DK Shivakumar

The post ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು: ಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...