ಮೈಸೂರು,ಫೆಬ್ರವರಿ,18,2025 (www.justkannada.in): ಕೋರ್ಟ್ ಆದೇಶ ಬಂದು 4 ತಿಂಗಳು ಕಳೆದರೂ ಒಳ ಮೀಸಲಾತಿ ಜಾರಿ ಮಾಡದೆ ರಾಜ್ಯ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ. ಒಳ ಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧ ಮುತ್ತಿಗೆ ಹಾಕಿ ಬಜೆಟ್ ಅಧಿವೇಶನಕ್ಕೆ ಅಡ್ಡಿಪಡಿಸಲಾಗುತ್ತದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ವಕಿಲ ಅರುಣ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೇದಿಕೆ ಅಧ್ಯಕ್ಷ ವಕಿಲ ಅರುಣ್ ಕುಮಾರ್, ಸಾಮಾಜಿಕ ನ್ಯಾಯ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ದಪ್ಪ ಚರ್ಮದವರು. ಕೋರ್ಟ್ ಆದೇಶ ಬಂದು 4 ತಿಂಗಳು ಕಳೆದರೂ ಒಳ ಮೀಸಲಾತಿ ಜಾರಿ ಮಾಡದೆ ಮೀನಾ ಮೇಷ ಎಣಿಸುತ್ತಿದೆ. ಒಳ ಮೀಸಲಾತಿ ಜಾರಿ ಆಗುವವರೆಗೂ ಯಾವುದೇ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಮಾಡಕೂಡದು ಎಂದು ಆಗ್ರಹಿಸಿದ್ದರೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕ ಮಾಡಲು ಸರ್ಕಾರ ಮುಂದಾಗಿದೆ.
ಸರ್ಕಾರದ ದ್ವಂದ್ವ ನೀತಿ ವಿರೋಧಿಸಿ ಇದೇ ತಿಂಗಳ 21 ರಂದು ಮೈಸೂರು ಮಂಡ್ಯ, ಕೊಡುಗು, ಚಾಮರಾಜನಗರದ ಎಡಗೈ ಸಮುದಾಯ ಎಲ್ಲಾ ವಕೀಲರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಲಿಲ್ಲ ಅಂದರೆ, ಬೆಂಗಳೂರು ಚೆಲೋ ಮಾಡಿ ವಿಧಾನಸೌಧದ ಮುತ್ತಿಗೆ ಹಾಕಿ ಅಧಿವೇಶನಕ್ಕಿ ಅಡ್ಡಿ ಪಡಿಸಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
Key words: implementing, internal, reservation, Vidhana Soudha
The post ಒಳ ಮೀಸಲಾತಿ ಜಾರಿಗೆ ಡೆಡ್ ಲೈನ್: ವಿಧಾನಸೌಧ ಮುತ್ತಿಗೆಯ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.