15
July, 2025

A News 365Times Venture

15
Tuesday
July, 2025

A News 365Times Venture

ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ: ಪೋಡಿಮುಕ್ತ ಗ್ರಾಮ, ಸರ್ವೇ ಕಾರ್ಯ ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಕರೆ

Date:

ಬೆಂಗಳೂರು ಏಪ್ರಿಲ್,11,2025 (www.justkannada.in): ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಖಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLRಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು. ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು. ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Key words: Revenue Department, mother department, CM Siddaramaiah

The post ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ: ಪೋಡಿಮುಕ್ತ ಗ್ರಾಮ, ಸರ್ವೇ ಕಾರ್ಯ ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಕರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...

Mysore Dasara: ಅಭಿಮನ್ಯು @59, ಅಂಬಾರಿ ಹೊರೋದು ಇದೇ ಕಡೆನಾ…?

ಮೈಸೂರು,ಜುಲೈ,15,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ  ಒಂದುವರೆ ತಿಂಗಳು...