ಬೆಂಗಳೂರು,ಮೇ,5,2025 (www.justkannada.in): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕನ್ನಡವನ್ನ ಹೋಲಿಸಿ ವಿವಾದಕ್ಕೆ ಗುರಿಯಾಗಿರುವ ಹಿಂದಿ ಗಾಯಕ ಸೋನು ನಿಗಮ್ ಗೆ ಬೆಂಗಳೂರಿನ ಅವಲಹಳ್ಳಿ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಕನ್ನಡ ಹಾಗೂ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಅವರ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಇದೀಗ ಪೊಲೀಸರು ಇ ಮೇಲ್ ಮತ್ತು ಪೋಸ್ಟ್ ಮೂಲಕ ಸೋನು ನಿಗಮ್ ಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ 1 ವಾರದೊಳಗಡೆ ಹೇಳಿಕೆ ಕುರಿತು ವಿವರಣೆ ನೀಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸೋನು ನಿಗಮ್ ಅವರ ಹೇಳಿಕೆಗಳನ್ನು ವಿಡಿಯೋ ಮಾಡಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸೋನು ನಿಗಮ್ ವಿರುದ್ದ ಕರ್ನಾಟಕದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Controversial statement, Notice, singer Sonu Nigam
The post ಕನ್ನಡ ಬಗ್ಗೆ ವಿವಾದಾತ್ಮಕ ಹೇಳಿಕೆ: ಗಾಯಕ ಸೋನು ನಿಗಮ್ ಗೆ ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.