19
July, 2025

A News 365Times Venture

19
Saturday
July, 2025

A News 365Times Venture

ಕರ್ನಾಟಕದಲ್ಲಿರುವುದು ಅತ್ಯಂತ ಭ್ರಷ್ಟ ಸರಕಾರ:  ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗು

Date:

ನವದೆಹಲಿ,ಫೆಬ್ರವರಿ,6,2025 (www.justkannada.in): ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್‌ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಆ ಪಕ್ಷದ ಸರಕಾರ ಯಾವ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರಕಾರ ಎಂದು ಅವರು ಕಿಡಿಕಾರಿದರು.

ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡರು ಗುಡುಗಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳ ಮಾತಿಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು; ಕಾಂಗ್ರೆಸ್ ಪಕ್ಷದ ಬಗ್ಗೆ ‘ಶೇಮ್‌ ಶೇಮ್‌’ ಎಂದು ಘೋಷಣೆಗಳನ್ನು ಕೂಗಿದರು.

ಕಾಂಗ್ರೆಸ್‌ ಸರಕಾರದ ಸಚಿವರ ಕಾರ್ಯವೈಖರಿ ಬಗ್ಗೆಯೂ ಮಾಜಿ ಪ್ರಧಾನಿಗಳು ತಮ್ಮ ಅಸಮಾಧಾನವನ್ನು ಹೊರಹಾಕಿದರು. ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಗಳನ್ನು ನಾನು ಈ ಸದನದಲ್ಲಿ ಓದಲೇ? ಎಂದು ಅವರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರು ಮಾಜಿ ಪ್ರಧಾನಿಗಳ ಭಾಷಣಕ್ಕೆ ಅಡ್ಡಿಪಡಿಸಲು ಯತ್ನಿಸಿದರು.

 ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಗಂಭೀರವಾಗಿದೆ ಎಂದು ಗೌಡರು

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಿನೇದಿನೆ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ನಗರದ ಜನಸಂಖ್ಯೆ 1.45 ಕೋಟಿ ದಾಟಿದೆ. ನಗರಕ್ಕೆ ಕಾವೇರಿ ನ್ಯಾಯಮಂಡಳಿಯು 20 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದು, ಅಷ್ಟು ಪ್ರಮಾಣದ ನೀರು ಏನೇನಕ್ಕೂ ಸಾಲದು. ಕನಿಷ್ಠ 50 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯ ಮಾಡಿದರು.

ಬೆಂಗಳೂರಿನ ನೀರಿನ ಸಮಸ್ಯೆ ಬಗೆಹರಿಸಲು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೆ. ಆಗ ಮಲ್ಲಿಕಾರ್ಜುನ ಖರ್ಗೆ ಸಚಿವರಾಗಿದ್ದರು. ಆದರೆ ಸಿಂಗ್ ಅವರು ಕೈ ಚೆಲ್ಲಿದ್ದರು. ಆದರೆ, ಈ ನೀರಿನ ಬಿಕ್ಕಟ್ಟನ್ನು ಬಗೆಹರಿಸಲು ಮೋದಿ ಅವರಿಂದ ಸಾಧ್ಯ. ಇದು ನನ್ನ ಬಲವಾದ ನಂಬಿಕೆ ಎಂದು ಅವರು ಹೇಳಿದರು. ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರ ಆಕ್ಷೇಪಗಳಿಗೆ ತಿರುಗೇಟು ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಲವಾಗಿ ಸಮರ್ಥಿಸಿಕೊಂಡರು.

Key words: Karnataka, corrupt government, Former PM, H.D. Deve Gowda

The post ಕರ್ನಾಟಕದಲ್ಲಿರುವುದು ಅತ್ಯಂತ ಭ್ರಷ್ಟ ಸರಕಾರ:  ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ...

ಮಾಹಿತಿ ಹಕ್ಕು ಆಯೋಗ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‍ನಲ್ಲಿ ಅದಾಲತ್ ಮಾದರಿ ಕಲಾಪ

ದಾವಣಗೆರೆ ಜುಲೈ.18, ೨೦೨೫:  ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು...