ಬೆಂಗಳೂರು, ಜೂನ್,17,2025 (www.justkannada.in): ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವಂತೆ ಸೂಚಿಸಿದೆ.
ಚಿತ್ರ ಬಿಡುಗಡೆಗೆ ತಡೆ ನೀಡುವುದು ಸರಿಯಲ್ಲ ಚಿತ್ರ ಬಿಡುಗಡೆಗೆ ಬೆದರಿಸುವುದು ಅಡ್ಡಿಪಡಿಸುವುದು ಸರಿಯಲ್ಲ. ಇಷ್ಟವಿಲ್ಲದಿದ್ರೆ ಸಿನಿಮಾ ನೋಡುವ ಅವಶ್ಯಕತೆ ಇಲ್ಲ. ಚಿತ್ರ ಬಿಡುಗಡೆಗೆ ಅವಕಾಶ ಕೊಡಬೇಕು. ಸಿನಿಮಾ ಬಿಡುಗಡೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ ಪ್ರತಿಕ್ರಿಯೆ ಕೇಳಿ ಸುಪ್ರೀಂಕೋರ್ಟ್ ವಿಚಾರಣೆಯನ್ನ ಗುರುವಾರಕ್ಕೆ ಮುಂದೂಡಿಕೆ ಮಾಡಿದೆ.
ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಇವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿ ಥಗ್ ಲೈಫ್ ಚಿತ್ರ ಬಿಡುಗಡೆಗೆ ನಿಷೇಧಿಸಲಾಗಿತ್ತು. ಅಲ್ಲದೆ ಹೈಕೋರ್ಟ್ ಸಹ ಕನ್ನಡಿಗರ ಕ್ಷಮೆ ಕೇಳುವಂತೆ ನಟ ಕಮಲ್ ಹಾಸನ್ ಗೆ ಪರೋಕ್ಷವಾಗಿ ಸೂಚಿಸಿತ್ತು.
Key words: Supreme Court, orders, release , Kamal Haasan, Thug Life, Karnataka
The post ಕರ್ನಾಟಕದಲ್ಲಿ ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.