ಬೆಂಗಳೂರು, ಜೂನ್ 13,2025 (www.justkannada.in): ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ವಿನಯ್ ಕುಲಕರ್ಣಿ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ, ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು.
Key words: Congress, MLA, Vinay Kulkarni , CBI, custody
The post ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.