5
March, 2026

A News 365Times Venture

5
Thursday
March, 2026

A News 365Times Venture

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಮೇ,10,2025 (www.justkannada.in): ಭಾರತ- ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆ  ಮೇಲೆ ನಿರಂತರವಾಗಿ ನಿಗಾ ಇಡಬೇಕು.  ಯುದ್ದದ ಪರಿಸ್ಥಿತಿ ತಿಳಿಯಾಗವವರೆಗೆ ಜನರಲ್ಲಿ ಜಾಗೃತಿ ಮೂಡಿಸಿ  ಯುದ್ದದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದರಾಗಬೇಕು.  ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಭದ್ರತೆ ಒದಗಿಸಬೇಕು. ಸುಳ್ಳು ಸುದ್ದಿ ಹರಡುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

Key words: maintain law and order, Increase, security, CM, Siddaramaiah, Meeting

The post ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...