13
March, 2026

A News 365Times Venture

13
Friday
March, 2026

A News 365Times Venture

ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು.

Date:

ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ನಿರ್ಮಿಸುವಂತೆ ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಗ್ರಹಿಸಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಶಾಸಕ ದಿನಕರ್ ಶೆಟ್ಟಿ, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾರವಾರದಲ್ಲಿ ನಿರ್ಮಿಸಿದ್ರೆ ನಮ್ಮ ಭಾಗದವರಿಗೆ ಅನುಕೂಲ ಆಗಲ್ಲ ಹಾಗಾಗಿ ಕುಮುಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ.  ಇದರಿಂದ ಶಿರಸಿ, ಕುಮುಟಾ ಹೊನ್ನಾವರ ಸೇರಿ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಕಾರವಾರ ಜಿಲ್ಲಾ ಕೇಂದ್ರ ಅಂತಾ ಹೇಳಿದ್ದಾರೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕೆಂಬ ನಿಯಮವಿದೆ. ಈಗಾಗಲೇ ಕಾರವಾರದಲ್ಲಿ ಮೆಡಿಕಲ್ ಕಾಲೇಜು ಆರಂಭವಾಗಿದೆ.  ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ. ಕಾರವಾರಕ್ಕೆ ತಜ್ಞ ವೈದ್ಯರು ಬರುವುದೇ ಕಷ್ಟ.  ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರೆ ವೈದ್ಯರು ಎಲ್ಲಿಂದ ಬರುತ್ತಾರೆ. ತಮ್ಮ ಕ್ಷೇತ್ರಕ್ಕೆ ಅನುಕೂಲ ಆಗಲಿದೆ ಅನ್ನೋದು ಶಾಸಕರ ವಾದ.  ಆದರೆ ವೈದ್ಯರು ಬರುವುದುನ್ನು ಗಮನಿಸಬೇಕು ಎಂದು ಸ್ಪಷ್ಟಪಡಿಸಿದರು.

Key words: super specialty hospital, Kumta, Karwar, minister

The post ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ...

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್

ಮೈಸೂರು, ಮಾರ್ಚ್, 12,2026 (www.justkannada.in): ಜಲ ಜೀವನ್ ಮಿಷನ್ (JJM) 2.0...

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...