ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತ ಬಂಧಿತ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರ್ ಸಿಬಿ ಮ್ಯಾನೇಜ್ ಮೆಂಟ್ ನ ಸಿಬ್ಬಂದಿಗಳಾದ ನಿಖಿಲ್ ಸೋಸಲೆ, ಸುಮಂತ್, ಡಿಎನ್ ಎ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರಿಗೆ ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಆರ್ ಸಿಬಿ ಮ್ಯಾನೇಜ್ ಮೆಂಟ್ ಮತ್ತು ಕೆಎಸ್ ಸಿಎ, ಡಿಎನ್ ಎ ಮ್ಯಾನೇಜ್ ಮೆಂಟ್ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಮಧ್ಯೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನ ಬಂಧಿಸಿ ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
Key words: stampede, 11 deaths, 14 day, judicial custody, four accused
The post ಕಾಲ್ತುಳಿತದಿಂದ 11 ಮಂದಿ ಸಾವು ಪ್ರಕರಣ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.