ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದ ಬಿಜೆಪಿ ದೂರು ನೀಡಿದೆ.
ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ದೂರು ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ಉಪಸ್ಥಿತರಿದ್ದರು.
ಅಮಾಯಕರ ಸಾವಿಗೆ ಕಾರಣ, ಸಾರ್ವಜನಿಕ ಹಣ ದುರ್ಬಳಕೆ ಆರೋಪದ ಮೇಲೆ ಸಿಎಂ , ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ದ ಕ್ರಮ ಜರುಗಿಸುವಂತೆ ಮನವಿ ಮಾಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
Key words: Stampede case, BJP , complaint, against, CM, DCM, Home Minister
The post ಕಾಲ್ತುಳಿತ ಕೇಸ್: ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ದ ಬಿಜೆಪಿ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.