ನವದೆಹಲಿ, ಜೂನ್, 10,2025 (www.justkannada.in): ಇಂದು ನಡೆದ ಸಭೆಯಲ್ಲಿ ಕಾಲ್ತುಳಿತ ಘಟನೆ ಮತ್ತು ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಹಲವು ಸೂಚನೆಗಳನ್ನ ನೀಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಳಿಕ ಈ ಕುರಿತು ಮಾತನಾಡಿದ ಕೆ.ಸಿ ವೇಣುಗೋಪಾಲ್, ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ನ್ಯಾಯಾಂಗ ತನಿಖೆಗೆ ನೀಡಲಾಗಿದೆ. ತನಿಖೆಗೆ ಹಸ್ತಕ್ಷೇಪ ಮಾಡಲ್ಲ. ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ ಜನಪರ ನಿರ್ಧಾರ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗ ಚರ್ಚೆ ನಡೆದಿದೆ. ಜಾತಿ ಗಣತಿ ಬಗ್ಗೆ ಚರ್ಚಿಸಲಾಗಿದೆ ಜಾತಿ ಗಣತಿ ಜಾರಿ ಬಗ್ಗೆ ಜೂನ್ 12 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಜಾತಿ ಗಣತಿಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಜಾತಿಗಣತಿಗೆ ಕೆಲ ಸಮುದಾಯದ ವಿರೋಧವಿದೆ . ಜಾತಿಗಣತಿಯಲ್ಲಿರುವ ಮಾಹಿತಿ ಹಳೆಯದು. 10 ವರ್ಷಗಳ ಹಿಂದೆ ಸಮೀಕ್ಷೆ ನಡೆಸಲಾಗಿದೆ. ಹೀಗಾಗಿ ತಪ್ಪು ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಸೂಚನೆ ನೀಡಲಾಗಿದೆ ಎಂದು ಕೆ.ಸಿ ವೇಣುಗೋಪಾಲ್ ತಿಳಿಸಿದರು.
Key words: Discussion, meeting, stampede, caste census, K.C. Venugopal
The post ಕಾಲ್ತುಳಿತ, ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ: ಹಲವು ಸೂಚನೆ- ಕೆ.ಸಿ ವೇಣುಗೋಪಾಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.