ಬೆಂಗಳೂರು, ಜೂನ್ ,17,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸಿತು. ಈ ಸಮಯದಲ್ಲಿ ಮುಚ್ಚಿದ ಲಕೋಟೆಯಲ್ಲಿ ಏಕೆ ವರದಿ ಸಲ್ಲಿಸುತ್ತಿದ್ದೀರಿ? ಎಂದು ಸರ್ಕಾರಕ್ಕೆ ನ್ಯಾಯಪೀಠ ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ತನಿಖೆ ಇನ್ನೂ ಬಾಕಿಯಿರುವುದರಿಂದ ಪೂರ್ವಾಗ್ರಹವಿರಬಾರದು, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ. ನ್ಯಾಯಾಂಗ ತನಿಖೆ ಬಾಕಿಯಿರುವುದರಿಂದ ವರದಿ ಬಹಿರಂಗ ಬೇಡ ಎಂದು ವಾದಿಸಿದರು.
ಸರ್ಕಾರದ ವಾದ ಆಲಿಸಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೈಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿಕೆ ಮಾಡಿತು.
Key words: Stampede case, High Court, notice , RCB, KSCA, DNA
The post ಕಾಲ್ತುಳಿತ ಪ್ರಕರಣ: RCB, KSCA, ಡಿಎನ್ ಎಗೆ ಹೈಕೋರ್ಟ್ ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.