ಬೆಂಗಳೂರು,ಮೇ,23,2025 (www.justkannada.in): ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ ಮಾಡುವಂತೆ ಸಂಗೀತ ನಿರ್ದೇಶಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್ ಜನ್ಯಾಗೆ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾವೇರಿಯ ಮೆರಗನ್ನು ಹೆಚ್ಚಿಸಲು ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆ ಮನವಿ ಮಾಡಿದ್ದಾರೆ.
ಕಾವೇರಿ ಆರತಿಯ ವೇಳೆ ಆಯ್ಕೆಯಾದ ಹಾಡು ಪ್ರಸಾರ ಮಾಡಲು ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಜಲ ಮಂಡಳಿ ಮತ್ತು ಕಾವೇರಿ ಆರತಿ ಸಮಿತಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
Key words: Kaveri Aarti, DCM, DK Sivakumar, appeals, music director
The post ‘ಕಾವೇರಿ ಆರತಿ’ ಬಗ್ಗೆ ಗೀತೆ ರಚಿಸಿ : ಸಂಗೀತ ನಿರ್ದೇಶಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.