16
July, 2025

A News 365Times Venture

16
Wednesday
July, 2025

A News 365Times Venture

ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ: ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ

Date:

ಬೆಂಗಳೂರು ಜೂನ್, 20,2025 (www.justkannada.in):  ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ.  ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಕೆವಿಕೆ ಸಭಾಂಗಣದಲ್ಲಿ “ವಿಜಯ ಕರ್ನಾಟಕ” ಪತ್ರಿಕೆ ಆಯೋಜಿಸಿದ್ದ “ಸೂಪರ್ ಸ್ಟಾರ್ ರೈತ” ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕ ರೈತರನ್ನು ಪುರಸ್ಕರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಶೇ 70 ರಷ್ಟು ಗ್ರಾಮೀಣ ಭಾರತ ಕೃಷಿ ಮೇಲೆ ಅವಲಂಭಿತವಾಗಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಭಿ, ಸ್ವಾಭಿಮಾನಿ ಆಗಲು ಕೃಷಿಕ ಸಮುದಾಯ, ರೈತ ಸಮುದಾಯ  ಕಾರಣ ಎಂದರು.

ಕೃಷಿ ಅಧಿಕಾರಿಗಳು ರೈತರ ಅಭಿಪ್ರಾಯ ಪಡೆದು, ರೈತರ ಅನುಭವ ಆಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಹಕಾರ ನೀಡಬೇಕು. Lab to Land ಮತ್ತು Land to Lab ಕಡೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಸಾಮಾಜಿಕ ನ್ಯಾಯ,  ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ‌ ಜನತೆಗೆ ಮನವರಿಕೆಯಾಗಿದೆ ಎಂದರು.

ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿಗೆ 26000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ ಎಂದು ರೈತ ಸಮಾಜವನ್ನು ಪ್ರಶ್ನಿಸಿದರು.

ಇಂಥಾ ಹೊತ್ತಲ್ಲಿ ರೈತ ಸಾಧಕರನ್ನು ಗುರುತಿಸಿ ಕರೆದು ಸನ್ಮಾನಿಸುತ್ತಿರುವುದು ಅತ್ಯಂತ ಪ್ರೋತ್ಸಾಹದಾಯಕ. ಸಮಗ್ರ ಕೃಷಿಯನ್ನು ಮಾಡದ ಹೊರತು ಕೃಷಿ ಲಾಭದಾಯಕವಲ್ಲ. ಜನಸಂಖ್ಯೆ ಬೆಳೆಯುತ್ತಿದೆ. ನಮ್ಮ ರಾಜ್ಯದಲ್ಲಿ ರಾಜಸ್ತಾನದ ನಂತರ ಅತಿ ಹೆಚ್ಚು ಒಣ ಕೃಷಿ ಭೂಮಿ ಹೆಚ್ಚು ಹೊಂದಿದೆ ಎಂದರು.

ನಾವು ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಮ್ಮ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿತ್ತು. ಈಗ ನಾವೇ ಅಧಿಕಾರಕ್ಕೆ ಬಂದು ಮತ್ತೆ ಜಾರಿ ಮಾಡಿದ್ದೇವೆ. ಇಲ್ಲಿಯವರೆಗೂ 24000 ಕೃಷಿ ಹೊಂಡ ನಿರ್ಮಿಸಿ ದಾಖಲೆ ಮಾಡಲಾಗಿದೆ ಎಂದರು.

ನಾನೂ ರೈತ ಕುಟುಂಬದಿಂದ ಬಂದವನು, ಕೃಷಿ ಬದುಕು-ರೈತರ ಬದುಕು, ಗ್ರಾಮೀಣ ಬದುಕಿನ‌ ಕಷ್ಟ ನಷ್ಟಗಳು ನನಗೆ ಗೊತ್ತಿದೆ. ಹೀಗಾಗಿ ರೈತರ ಪರವಾಗಿ ಸರ್ಕಾರದ ಮುಂದೆ ಬಂದ ಎಲ್ಲಾ ಪ್ರಸ್ತಾವನೆಗಳಿಗೂ ಮಂಜೂರಾತಿ ನೀಡುತ್ತಿದ್ದೇವೆ. ರೈತರಿಗೆ ಹೆಚ್ಚು ಒತ್ತು ಕೊಡುವ ಕೆಲಸಗಳನ್ನು ಮಾಡುತ್ತಿದ್ದೇವೆ. ಅದರಲ್ಲೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ  ಎಂದರು.

43% ಸಾವಯವ ಇಂಗಾಲ ಕಡಿಮೆ ಆಗುತ್ತಿರುವುದರಿಂದ ಭೂಮಿಯ ಫಲವತ್ತತೆ ಕಡಿಮೆ ಆಗಿ ರೈತರ ಉತ್ಪಾದನೆ, ಆದಾಯ ಕಡಿಮೆ ಆಗುತ್ತದೆ. ಇಂಥಾ ಹೊತ್ತಲ್ಲಿ “ಸೂಪರ್ ಸ್ಟಾರ್ ರೈತ” ಪುರಸ್ಕಾರಕ್ಕೆ ಒಳಗಾಗಿರುವವರು ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು, ಇವರನ್ನು ವಿಜಯ ಕರ್ನಾಟಕ ಗುರುತಿಸಿರುವುದು ಒಳ್ಳೆಯದು ಎಂದರು.

ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಜಾರಿಗೆ ತಂದ “ನರೇಗಾ” ಕೃಷಿಗೆ ಬಹಳ ದೊಡ್ಡ ಅನುಕೂಲ ಕಲ್ಪಿಸಿತು ಎಂದರು.  ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲುವರಾಯಸ್ವಾಮಿ, ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ ಉಪಸ್ಥಿತರಿದ್ದರು.vtu

Key words: More employment, generation , agriculture, CM Siddaramaiah

The post ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ: ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...