ಬೆಂಗಳೂರು, ಜೂನ್, 19,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಏರ್ಪೋರ್ಟ್ ಭದ್ರತಾ ಪಡೆಗೆ ಮೇಲ್ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್ಲೈನ್ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್ ಎ ಫೇಲ್ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.
ಬೆದರಿಕೆ ಮೇಲ್ ಹಿನ್ನೆಲೆ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ. ಸದ್ಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸರು ಮತ್ತು ಅಧಿಕಾರಿಗಳಿಗೆ ಈ ಹುಸಿ ಬಾಂಬ್ ಮೇಲ್ ಮತ್ತು ಕರೆಗಳು ತಲೆ ನೋವಾಗಿದ್ದು, ಹುಸಿ ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಾಗೆಯೇ ಬೆಂಗಳೂರಿನ ಪುಲಕೇಶಿ ನಗರ ಠಾಣಾ ವ್ಯಾಪ್ತಿಯ ಪಾಟರಿ ರಸ್ತೆಯಲ್ಲಿರುವ ಕ್ಲಾರೆನ್ಸ್ ಖಾಸಗಿ ಶಾಲೆಗೂ ಬೆದರಿಕೆ ಇ-ಮೇಲ್ ಬಂದಿದೆ ಎನ್ನಲಾಗಿದೆ. ನಿಮ್ಮ ಸ್ಕೂಲ್ ನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಬೆದರಿಕೆ ಇಮೇಲ್ ಬಂದಿದ.
ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ ಹಲವು ಶಾಲೆಗಳು ಮತ್ತು ಪ್ರತಿಷ್ಠಿತ ಹೋಟೆಲ್ ಗಳಿಗೂ ಬಾಂಬ್ ಬೆದರಿಕೆ ಬಂದಿತ್ತು.
Key words: Fake bomb, threat mail, Kempegowda Airport
The post ಕೆಂಪೇಗೌಡ ಏರ್ಪೋರ್ಟ್ಗೆ ಹುಸಿ ಬಾಂಬ್ ಮೇಲ್ ಬೆದರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.