ಬೆಂಗಳೂರು ಗ್ರಾಮಾಂತರ , ಜೂನ್,2,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪರಿಶೀಲನೆ ನಡೆಸಿದರು.
ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದ್ದು, ಅಧಿಕಾರಿಗಳಿಂದ ಥೀಮ್ ಪಾರ್ಕ್ ನಿರ್ಮಾಣದ ಇಂಚಿಂಚು ಮಾಹಿತಿ ಪಡೆದರು.
ಕಾಮಗಾರಿಯು ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಮುಂದಿನ ನಾಲ್ಕು ತಿಂಗಳಲ್ಲಿ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ ಎಂದರು.
ಕಾಮಗಾರಿ ವೀಕ್ಷಣೆ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಉಷಾರಾಣಿ, ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Key words: Minister ,Krishna Byre Gowda, Kempegowda Theme Park
The post ‘ಕೆಂಪೇಗೌಡ ತೀಮ್ ಪಾರ್ಕ್’ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.