ಮಂಡ್ಯ,ಜೂನ್,30,2025 (www.justkannada.in): ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲೇ ಭರ್ತಿಯಾದ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಿದರು.
ಇಂದು ಅಭಿಜಿತ್ ಶುಭ ಮುಹೂರ್ತದಲ್ಲಿ ಸಿಎಂ ಸಿದ್ದರಾಮಯ್ಯ ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ್ದು, ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ಮಾಡಲಾಯಿತು.
ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರಾದ ಎಚ್.ಸಿ.ಮಹದೇವಪ್ಪ , ಕೆ.ವೆಂಕಟೇಶ್ ಸಾಥ್ ನೀಡಿದರು. ಕೆಆರ್ ಎಸ್ ಜಲಾಶಯಕ್ಕೆ 4ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.
ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವುದು ಬಹಳ ಅಪರೂಪ. ಈ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲೇ ಸಂಪೂರ್ಣ ಭರ್ತಿಯಾಗಿದೆ.
Key words: CM Siddaramaiah, Bagina, KRS reservoir, Mandya
The post ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.