7
March, 2026

A News 365Times Venture

7
Saturday
March, 2026

A News 365Times Venture

ಕೆಎಸ್ ಡಿ ಎಲ್ ಗೆ ಬ್ರಿಟಿಷ್ ಹೈಕಮಿಷನರ್ ಭೇಟಿ: ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

Date:

ಬೆಂಗಳೂರು,ಜೂನ್,25,2025 (www.justkannada.in):  ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (ಕೆಎಸ್ಡಿಎಲ್) ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಎಸ್ ಡಿಎಲ್ ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಬರಮಾಡಿಕೊಂಡರು. ಜತೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಇದ್ದರು. ಈ ಸಂದರ್ಭದಲ್ಲಿ, ಕೆಎಸ್ ಡಿ ಎಲ್ ಚರಿತ್ರೆಯನ್ನು ಕಟ್ಟಿಕೊಡುವ ಪ್ರಾತ್ಯಕ್ಷಿಕೆಯನ್ನು ಲಿಂಡಿ ಮತ್ತು ಅಯ್ಯರ್ ಇಬ್ಬರಿಗೂ ಪ್ರದರ್ಶಿಸಲಾಯಿತು. ಸಂಸ್ಥೆಯ ಉಗಮದ ಹಿನ್ನೆಲೆಯಲ್ಲಿ ಬ್ರಿಟನ್ನಿನ ಪಾತ್ರವಿರುವುದನ್ನು ಕೇಳಿ, ಇಬ್ಬರೂ ಅಚ್ಚರಿ ವ್ಯಕ್ತಪಡಿಸಿದರು. ಜತೆಯಲ್ಲೇ ಕೆಎಸ್ ಡಿಎಲ್ ಉತ್ಪನ್ನಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಲಿಂಡಿ ಮತ್ತು ಅಯ್ಯರ್ ಇಬ್ಬರೂ ಸಂಸ್ಥೆಯ ಉತ್ಪನ್ನಗಳ ತಯಾರಿಕೆ ವಿಧಾನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲಿಂಡಿ ಕ್ಯಾಮರಾನ್, ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವುದರಿಂದ ಎರಡೂ ದೇಶಗಳಿಗೂ ಸಾಕಷ್ಟು ಲಾಭವಾಗಲಿದೆ. ನಾವು ನಮ್ಮ ನಮ್ಮ ನೈಪುಣ್ಯಗಳನ್ನು ಪರಸ್ಪರರ ಹಿತಗಳಿಗೆ ಧಕ್ಕೆಯಾಗದಂತೆ ವಿನಿಮಯ ಮಾಡಿಕೊಳ್ಳಬೇಕು. ಈ ಒಡಂಬಡಿಕೆಯ ಲಾಭವು ಕೈಗಾರಿಕಾ ಬೆಳವಣಿಗೆ ಮತ್ತು ವಾಣಿಜ್ಯ ವಹಿವಾಟಿನಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕಕ್ಕೂ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ನೂರಾ ಎಂಟು ವರ್ಷಗಳ ಹಿಂದೆ, ಅಂದರೆ 20ನೇ ಶತಮಾನದ ಎರಡನೆಯ ದಶಕದಲ್ಲಿ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಸ್ಥಾನದಿಂದ ಪರಿಣತರೊಬ್ಬರನ್ನು ಬ್ರಿಟನ್ನಿಗೆ ಕಳುಹಿಸಿ, ಸಾಬೂನು ತಯಾರಿಕೆ ತಂತ್ರಜ್ಞಾನದ ಪರಿಚಯ ಮಾಡಿಕೊಂಡರು. ಆಮೇಲೆ, ನಾಲ್ವಡಿ ಮತ್ತು ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಗೊಂಡ ಕೆಎಸ್ಡಿಎಲ್ ಉತ್ಕೃಷ್ಟ ಮಟ್ಟಕ್ಕೆ ಬೆಳೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

`ಕೆಎಸ್ ಡಿಎಲ್ ಉತ್ಪನ್ನಗಳನ್ನು ಸದ್ಯಕ್ಕೆ 23 ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಯೂರೋಪಿಯನ್ ರಾಷ್ಟ್ರಗಳಿಗೂ ಮೈಸೂರು ಸ್ಯಾಂಡಲ್ ಸೋಪ್, ಶವರ್ ಜೆಲ್ ಮುಂತಾದ ಗುಣಮಟ್ಟದ ಉತ್ಪನ್ನಗಳನ್ನು ಮತ್ತಷ್ಟು ರವಾನಿಸಲಾಗುವುದು. ಇದಕ್ಕೆ ಬ್ರಿಟನ್ನಿನ ಸಹಕಾರವೂ ನಮಗೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಾರುಕಟ್ಟೆ ವಿಸ್ತರಣೆ ನಡೆಯುತ್ತಿದೆ’ ಎಂದು ತಿಳಿಸಿದರು.

ಸಂಸ್ಥೆಯು ಕಳೆದ ಸಾಲಿನಲ್ಲಿ 416 ಕೋಟಿ ರೂ. ಲಾಭ ಗಳಿಸಿದ್ದು, 2028ರ ವೇಳೆಗೆ ವಾರ್ಷಿಕ ವಹಿವಾಟನ್ನು 3,000 ಕೋಟಿ ರೂ.ಗಳಿಗೆ ಕೊಂಡೊಯ್ಯಲಾಗುವುದು. ಜತೆಗೆ ವಿಜಯಪುರದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಉತ್ಪಾದನಾ ಘಟಕವನ್ನೂ ಆರಂಭಿಸಲಾಗುವುದು. ಸದ್ಯದಲ್ಲೇ ಸಂಸ್ಥೆಯ ವತಿಯಿಂದ ನಾನಾ ತರಹದ ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದರು.

ಜೊತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಇದ್ದರು.vtu

Key words: British High Commissioner, visits ,KSDL, Minister, MB Patil

The post ಕೆಎಸ್ ಡಿ ಎಲ್ ಗೆ ಬ್ರಿಟಿಷ್ ಹೈಕಮಿಷನರ್ ಭೇಟಿ: ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....