ಕೆನಡಾ,ಫೆಬ್ರವರಿ,9,2026 (www.justkannada.in): ಕೆನಡಾದಲ್ಲಿ ವಾಸವಿದ್ದ ಕರ್ನಾಟಕದ ಕನ್ನಡಿಗರೊಬ್ಬರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಕಳೆದ ಆರು ವರ್ಷಗಳಿಂದ ಕೆನಡಾದ ಖಾಸಗಿ ಕಂಪನಿಯಲ್ಲಿ ಮೃತ ಚಂದನ್ ಕುಮಾರ್ ಕೆಲಸ ಮಾಡುತ್ತಿದ್ದರು. ಚಂದನ್ ಕುಮಾರ್ ಹತ್ಯೆಯಾಗಿರುವ ವಿಚಾರದ ಬಗ್ಗೆ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗನ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆಯೇ ಚಂದನ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಂದನ್ ಕುಮಾರ್ ಅವರ ತಂದೆ ನಿವೃತ್ತ ಶಿಕ್ಷಕರಾಗಿದ್ದಾರೆ.
Key words: Kannadiga, death, firing, Canada
The post ಕೆನಡಾದಲ್ಲಿ ಗುಂಡಿನ ದಾಳಿಗೆ ಕನ್ನಡಿಗ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




