23
August, 2026

A News 365Times Venture

23
Sunday
August, 2026

A News 365Times Venture

ಕೆಪಿಎಸ್ ಸಿ ಮಾಜಿ ಅಧ್ಯಕ್ಷರ ಮರುನೇಮಕಕ್ಕೆ ಆದೇಶ ವಿಚಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು 7ದಿನದೊಳಗೆ ಮರುನೇಮಕ ಮಾಡಲು ಹೈಕೋರ್ಟ್  ಆದೇಶ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ,  ಕೆಪಿಎಸ್ ಸಿ ಅಧ್ಯಕ್ಷರ ಬಗ್ಗೆ ರಾಜ್ಯಪಾಲರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಬಾರದು ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ ಕೋರ್ಟ್ ಗೆ ಹೋಗಿದ್ದರು.  ಹೈಕೋರ್ಟ್ ಕೂಡ ಸಂಪುಟ ಸಭೆಯಲ್ಲಿ ಅಭಿಪ್ರಾಯ ಪಡೆಯಲು ಸೂಚಿಸಿದೆ.

ಸಂಪುಟ ಸಚಿವರುಗಳ ಅಭಿಪ್ರಾಯ ಪಡೆದು ಆದೇಶ ಮಾಡಿ ಅಂತಾ ತಿಳಿಸಿದೆ.  ಈ ಕಾರಣದಿಂದಾಗಿ ರಾಜ್ಯಪಾಲರು ಹೊರಡಿಸಿದ ಆದೇಶ ಹಿಂಪಡೆದಿದ್ದಾರೆ. ನಾವು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ.   ಸಂಪುಟದ ನಿರ್ಧಾರವನ್ನು ರಾಜ್ಯಪಾಲರಿಗೆ ತಿಳಿಸುತ್ತೇವೆ ಎಂದು ಗೃಹ ಸಚಿವ  ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: Order, re-appoint, former KPCC president, cabinet meeting, Minister, Priyank Kharge

The post ಕೆಪಿಎಸ್ ಸಿ ಮಾಜಿ ಅಧ್ಯಕ್ಷರ ಮರುನೇಮಕಕ್ಕೆ ಆದೇಶ ವಿಚಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...