15
March, 2026

A News 365Times Venture

15
Sunday
March, 2026

A News 365Times Venture

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

Date:

ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇಂದು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಾರ್ಟಿಯವರು ಏನು ಹೇಳಿದ್ದಾರೆ ಅಂತ ಈಗಾಗಲೇ ಸಿಎಂ ಅವರೇ ಉಲ್ಲೇಖಿಸಿದ್ದಾರೆ. ನಾನು ಮುಖ್ಯಮಂತ್ರಿಗಳ ಹೇಳಿಕೆಯನ್ನ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ . ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಿಎಂ ಅವರೇ ಉತ್ತರಿಸಿದ್ದಾರೆ . ಸಿಎಂ ಅವರು ಮಾತನಾಡಿದ ಮೇಲೆ ಪದೇ ಪದೇ ನಾನು ಮಾತನಾಡೋದು ಸರಿಯಲ್ಲ. ಅಧಿಕಾರ ಶೇರಿಂಗ್ ಬಗ್ಗೆ ನಮಗೆ ಗಾಬರಿ ಇಲ್ಲ ನಿಮಗೆ ಯಾಕೆ ಗಾಬರಿ ಎಂದು ಮಾಧ್ಯಮಗಳನ್ನೇ ಪ್ರಶ್ನಿಸಿದರು.

ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಸಾಕಷ್ಟು ಬೆಂಬಲಿಗರಿಗೆ ಆಸೆ ಇದೆ. ಎಲ್ಲರಿಗೂ ಆಸೆಗಳು ಇರುತ್ತದೆ ಈ ಬಗ್ಗೆ ನಾನು ಸದ್ಯಕ್ಕೆ ಮಾತನಾಡಲ್ಲ. ಕಾಮೆಂಟ್ ಮಾಡುವ ಅವಶ್ಯಕತೆ ನನಗಿಲ್ಲ. ಮಾತನಾಡುವವರೇ ಎಲ್ಲಾ ಪ್ರಶ್ನೆಗಳನ್ನ ಮತ್ತು ಉತ್ತರಗಳನ್ನ ಅವರೇ ಕೊಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.vtu

Key words: MLAs, support, DCM, DK Shivakumar, CM, statement

The post ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...