12
July, 2025

A News 365Times Venture

12
Saturday
July, 2025

A News 365Times Venture

ಕೇಂದ್ರದಿಂದ ಶಿಕ್ಷಣ, ಆರೋಗ್ಯ ಉದ್ಯೋಗಕ್ಕೆ ಒತ್ತು: ದೇಶದ ಅಭಿವೃದ್ದಿಗೆ ಬದ್ದ – ರಾಷ್ಟ್ರಪತಿ ದ್ರೌಪದಿ ಮುರ್ಮು

Date:

ನವದೆಹಲಿ,ಜನವರಿ,31,2025 (www.justkannada.in): ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯ,  ಉದ್ಯೋಗಕ್ಕೆ ಒತ್ತು ನೀಡುತ್ತಿದ್ದು ದೇಶದ, ಬಡವರ ಅಭಿವೃದ್ದಿಗೆ ಬದ್ದವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು.

ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಸದನಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು.

ಕೇಂದ್ರ ಸರ್ಕಾರ ಬಡವರು ಮಹಿಳೆಯರು ಯುವಕರಿಗೆ ಸಾಕಷ್ಟು ಯೋಜನೆ ಜಾರಿ ಮಾಡಿದೆ.  ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್ ನೀಡಲಾಗುತ್ತಿದೆ. ಆಯುಷ್ಮಾನ್  ಯೋಜನೆಯಡಿ ಉಚಿತ ಆರೋಗ್ಯ ಚಿಕಿತ್ಸೆ ಬಡತನದಿಂದ ಮುಕ್ತವಾಗಲು ಯೋಜನೆಗಳನ್ನ ಜಾರಿ ಮಾಡುತ್ತಿದೆ. 70 ವರ್ಷ ದಾಟಿದವರಿಗೆ ಆರೋಗ್ಯ ವಿಮೆ ಯೋಜನೆ. ಈ ಬಜೆಟ್ ನಲ್ಲಿ ಕೃಷಿ ಮಹಿಳೆಯರಿಗೆ ಒತ್ತು ನೀಡಲಾಗುತ್ತದೆ. ಸರ್ಕಾರಿ ನೌಕರರಿಗೆ 50% ಪಿಂಚಣಿ ಸಿಗಲಿದೆ. ಈ ಮೂಲಕ ದೇಶದ ಅಭಿವೃದ್ದಿಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು.

ಇಂದು ನಮ್ಮ ಯುವಕರು ಸ್ಟಾರ್ಟ್‌ಅಪ್‌ನಿಂದ ದೇಶಕ್ಕೆ ಕೀರ್ತಿ ತರುತ್ತಿದ್ದಾರೆ. ಕಳೆದ ದಶಕದಲ್ಲಿ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗಳ ಮೂಲಕ ಯುವಕರಿಗೆ ಹಲವು ಅವಕಾಶಗಳನ್ನು ಒದಗಿಸಲಾಗಿದೆ. ಇಂಟರ್ನ್‌ಶಿಪ್ ಯೋಜನೆಯ ಮೂಲಕ ಯುವಕರಿಗೆ ಹೊಸ ಅನುಭವ ನೀಡಲಾಗುತ್ತಿದೆ.

ಇಂದು ದೇಶದಲ್ಲಿ ಲಕ್ಷಾಂತರ ಸ್ಟಾರ್ಟಪ್‌ಗಳು ಕೆಲಸ ಮಾಡುತ್ತಿವೆ. ಎಐ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಜಗತ್ತಿಗೆ ದಾರಿ ತೋರಿಸುತ್ತಿದೆ. ನನ್ನ ಸರ್ಕಾರವು ವಿದ್ಯಾರ್ಥಿಗಳಿಗೆ ಆಧುನಿಕ ಪಠ್ಯಕ್ರಮವನ್ನು ಸಿದ್ಧಪಡಿಸುತ್ತಿದೆ.

ಯುವಕರ ಶಿಕ್ಷಣಕ್ಕೆ ನಮ್ಮ ಸರ್ಕಾರ ವಿಶೇಷ ಗಮನ ನೀಡಿದ್ದು, ಅವರಿಗೆ ಹೊಸ ಉದ್ಯೋಗಾವಕಾಶ ಕಲ್ಪಿಸಿದೆ. ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಯುವಕರಿಗೆ ಅವಕಾಶಗಳನ್ನು ನೀಡಲಾಗುತ್ತದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಸರ್ಕಾರ 70 ಸಾವಿರ ಕೋಟಿ ರೂ. ದೇಶವು ಅಟಲ್ ಜಿಯವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ, ಅವರ ಅಟಲ್ ಗ್ರಾಮ ಸಡಕ್ ಯೋಜನೆಯು ಹೊಸ ಎತ್ತರವನ್ನು ತಲುಪುತ್ತಿದೆ ಎಂದರು.

ರಾಷ್ಟ್ರದ 10 ಕೋಟಿಗೂ ಹೆಚ್ಚು ಮಹಿಳೆಯರು ಸ್ವಯಂಸೇವಾ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಲಖ್ಪತಿ ದೀದಿಗಳ ಸಂಖ್ಯೆಯನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ ಎಂದು ಮುರ್ಮು ಹೇಳಿದರು. ಕೆಲ ತಿಂಗಳ ಹಿಂದೆ ಬಿಮಾ ಸಖಿ ಅಭಿಯಾನವೂ ಆರಂಭವಾಗಿದೆ ಎಂದು ದ್ರೌಪದಿ ಮುರ್ಮು ತಿಳಿಸಿದರು.

Key words: Union Budget, President,  Draupadi Murmu

The post ಕೇಂದ್ರದಿಂದ ಶಿಕ್ಷಣ, ಆರೋಗ್ಯ ಉದ್ಯೋಗಕ್ಕೆ ಒತ್ತು: ದೇಶದ ಅಭಿವೃದ್ದಿಗೆ ಬದ್ದ – ರಾಷ್ಟ್ರಪತಿ ದ್ರೌಪದಿ ಮುರ್ಮು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...