11
March, 2026

A News 365Times Venture

11
Wednesday
March, 2026

A News 365Times Venture

ಕೇಂದ್ರ ಸರ್ಕಾರ ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಹಿಂಪಡೆಯಲಿ: ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹ

Date:

ಬೆಂಗಳೂರು,ಏಪ್ರಿಲ್,28,2025 (www.justkannada.in):  ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಮೊದಲು ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಹಿಂಪಡೆಯಲಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು ಈ ಬಗ್ಗೆ ಜಾಗೃತ ಮೂಡಿಸಲು ಬೆಳಗಾವಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: DCM, DK Shivakumar, central government, withdraw, ban, Mangalsutra, janivar

The post ಕೇಂದ್ರ ಸರ್ಕಾರ ಮಂಗಳಸೂತ್ರ, ಜನಿವಾರ ನಿಷೇಧ ಆದೇಶ ಹಿಂಪಡೆಯಲಿ: ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...