ಮಂಗಳೂರು,ಮೇ,10,2025 (www.justkannada.in): ಮಂಗಳೂರಿನಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂದು ಆರೋಪಿಸಿದ ಬಿಜೆಪಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ ಎಂದರು.
‘ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ. ಕೊಲೆ ಯಾರು ಮಾಡಿದ್ದಾರೆ ಅವರನ್ನು ಬಂಧಿಸಿದ್ದೇವೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬ ಬಿಜೆಪಿಯವರ ಕಪೋಲಕಲ್ಪಿತ ಆರೋಪಗಳಿಗೆ ಉತ್ತರ ಕೊಡಲು ಆಗಲ್ಲ. ಊಹಾಪೋಹದ ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿಯವರು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ನೀಡಲಿ ಎಂದು ತಿರುಗೇಟು ಕೊಟ್ಟರು.
Key words: Suhas shetty, murder case, Minister, Dinesh Gundurao, BJP
The post ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ- ಸಚಿವ ದಿನೇಶ್ ಗುಂಡೂರಾವ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.