16
July, 2025

A News 365Times Venture

16
Wednesday
July, 2025

A News 365Times Venture

ಕೋವಿಡ್ ಹೆಚ್ಚಳ: ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮೇ,26,2025 (www.justkannada.in):  ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು  ಸಭೆ ನಡೆಸಿದರು.

ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ  ಸಿಎಂ ಸಿದ್ದರಾಮಯ್ಯ ಕೆಲ ಸೂಚನೆಗಳನ್ನು ನೀಡಿದರು.

ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.  ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು  ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು. ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಸೂಚಿಸಿದರು.vtu

ಕಳೆದ ಜನವರಿಯಿಂದಲೂ ಕೊರೊನಾ  ಪ್ರಕರಣಗಳು ಅಲ್ಲಲ್ಲಿ ಒಂದೂ  ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು  ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.  SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಹರಡದಂತೆ  ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ  ಪೋಷಕರು ಕ್ರಮ ವಹಿಸಲು , ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ,  ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ  ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು

ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಿ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಿ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಯಾವುದೇ  ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲೆಗಳಲ್ಲೂ  ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ   ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸೂಚಿಸಿದರು .

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ.   ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು  ಸಿದ್ದವಾಗಿಟ್ಟು ಕೊಳ್ಳಿ. ಸಾಮಾಜಿಕ ಮಾಧ್ಯಮಗಳಲ ಮೂಲಕ  ಕಾಲ ಕಾಲಕ್ಕೆ  ಸಾರ್ವಜನಿಕರಿಗೆ ಮಾಹಿತಿ ನೀಡಲು ಸೂಚಿಸಿದರು.

Key words: Covid, Increase, CM Siddaramaiah, meeting

The post ಕೋವಿಡ್ ಹೆಚ್ಚಳ: ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...